ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಖುದ್ದು ಸಿದ್ದರಾಮಯ್ಯ ಅವರೇ 500ನೇ ಕೋಟಿಯ ಟಿಕೆಟ್ ಅನ್ನು ಸಾಂಕೇತಿಕವಾಗಿ ವಿತರಣೆ ಮಾಡಿದರು.
ರಾಜ್ಯ ಸರ್ಕಾರ ನೀಡಿದ ಉಚಿತ ಟಿಕೆಟ್ ಪಡೆದು 500 ನೇ ಕೋಟಿ ಬಾರಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ನಡೆಸಿದ್ದಾರೆ.
500 ಕೋಟಿ ಪ್ರಯಾಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾಂಕೇತಿಕವಾಗಿ ಮಹಿಳೆಯೊಬ್ಬರಿಗೆ ಟಿಕೇಟ್ ವಿತರಿಸಿದರು.
























