ಭಾರಿ ಮಳೆ : ಕಡಬ, ಬಂಟ್ವಾಳ, ಉಳ್ಳಾಲ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಕಡಬ: ತಾಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ಬಿಇಒ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ನೀಡಿದ್ದಾರೆ.
ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎನ್ನಲಾಗಿದೆ.

ಬಂಟ್ವಾಳ ಮತ್ತು ಉಳ್ಳಾಲ ತಾಲೂಕುಗಳಲ್ಲೂ ಎಲ್ಲ ಅಂಗನವಾಡಿ, ಶಾಲೆ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಸಾರಲಾಗಿದೆ. ಕಡಬ ತಾಲೂಕಿನಾದ್ಯಂತ ನಿನ್ನೆ ರಾತ್ರಿಯಿಂದೀಚೆಗೆ ಭಾರಿ ಮಳೆಯಾಗುತ್ತಿದೆ.

error: Content is protected !!
Scroll to Top