ರಾಜ್ಯದಲ್ಲಿ ಸಿದ್ದರಾಮಯ್ಯ ಒಬ್ಬರೇ ಮುಖ್ಯಮಂತ್ರಿ: ಸಚಿವ ಡಾ. ಎಚ್. ಸಿ. ಮಹದೇವಪ್ಪ

ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕಲ್ಲ

ಮೈಸೂರು: ಸಾಧನಾ ಸಮಾವೇಶ ಸಿಎಂ ‌ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಕಾರ್ಯಕ್ರಮ ಅಲ್ಲ ಎಂದು ಸಚಿವ ಡಾ. ಎಚ್. ಸಿ. ಮಹದೇವಪ್ಪ ತಿಳಿಸಿದ್ದಾರೆ.

ಜು. 19 ರಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾದ ಸಾಧನಾ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಈ‌ ಮೊದಲೇ ಜನರು ಶಕ್ತಿ ತುಂಬಿದ್ದಾರೆ. ಈ‌ ಕಾರ್ಯಕ್ರಮ ಈಗಾಗಲೇ ಯಶಸ್ವಿಯಾಗಿದೆ. ಈ ಸಾಧನಾ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬರಲಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.





















































 
 

ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಒಬ್ಬರೇ ಮುಖ್ಯಮಂತ್ರಿ. ಬೇರೆ ಮುಖ್ಯಮಂತ್ರಿ ಇಲ್ಲ. ಸುರ್ಜೇವಾಲ ನಮ್ಮ ಪಕ್ಷದ ವರಿಷ್ಠರು. ಅವರಿಗೆ ನಮ್ಮನ್ನು ಕರೆಯುವ, ಮಾತನಾಡುವ ಹಕ್ಕಿದೆ. ನನ್ನನ್ನೂ ಕರೆದಿದ್ದರು. ನಾನು ಹೋಗಿ ಮಾತನಾಡಿಸಿ ಬಂದಿದ್ದೇನೆ. ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಮಂತ್ರಿಗಳ ಜೊತೆ ಚರ್ಚೆ ನಡೆಸಬೇಕು ಎಂದೇನಿಲ್ಲ ಎಂದು ಅವರು ನುಡಿದಿದ್ದಾರೆ.

error: Content is protected !!
Scroll to Top