ನವದೆಹಲಿ: ಜಾರ್ಖಂಡ್ ರಾಜ್ಯದ ಬೊಕಾರೋ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರನ್ನು ಯಮಪುರಿಗೆ ಅಟ್ಟಲಾಗಿದೆ. ಈ ಸಂದರ್ಭದಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಭದ್ರತಾ ಪಡೆಗಳು ಬಿರ್ಹೊರ್ಡೆರಾ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸಿದ್ದು, ಈವೇಳೆ ಯೋಧರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಸಿಆರ್ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಿರುವುದಾಗಿ ಮೂಲಗಳು ಮಾಹಿತಿ ನೀಡಿವೆ.
ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
























