ಪೊಲೀಸ್ ಕಾನ್ಸ್‌ಟೆಬಲ್‌ನಿಂದ ಅತ್ಯಾಚಾರ : ಕಮಿಷನರ್‌ಗೆ ದೂರು, ಆರೋಪಿಯ ಬಂಧನ

ಮಂಗಳೂರು: ತನ್ನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬರು ‌ಅತ್ಯಾಚಾರ ಎಸಗಿದ್ದಾಗಿ ಮಹಿಳೆಯೊಬ್ಬರು ಪೊಲೀಸ್ ಕಮಿಷನರ್‌ ಅವರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿಯನ್ನು ಕಾವೂರು ಪೊಲೀಸು ಠಾಣೆಯಲ್ಲಿ ಕಾನ್ಸ್‌ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರ ನಾಯಕ್ ಎಂದು ಗುರುತಿಸಲಾಗಿದೆ. ಕಂಕನಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಚಂದ್ರ ನಾಯಕ್ ಅವರು ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾಗಿ ಮಹಿಳೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ದೂರು ಸಲ್ಲಿಸಿದ್ದರು. ಆ ದೂರಿನನ್ವಯ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.





















































 
 
error: Content is protected !!
Scroll to Top