ಭಾರಿ ಮಳೆ : ಐದು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.17ರಂದು ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡುಬಿದಿರೆ, ಮೂಲ್ಕಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಸಂಬಂಧಿಸಿದ ತಾಲೂಕು ತಹಸೀಲ್ದಾರ್‌ಗಳು ಪ್ರಕಟಣೆ ಹೊರಡಿಸಿದ್ದಾರೆ.

ಈ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ರಜೆ ಘೋಷಿಸಿ ಆಯಾ ತಾಲೂಕಿನ ತಹಸೀಲ್ದಾರರು ಘೋಷಣೆ ಮಾಡಿದ್ದಾರೆ.

error: Content is protected !!
Scroll to Top