ಧಗಧಗಿಸಿ ಉರಿದ 5 ಮಹಡಿಯ ವಾಣಿಜ್ಯ ಕಟ್ಟಡ
ಬಾಗ್ದಾದ್: ಇರಾಕ್‌ನ ಪೂರ್ವಕ್ಕಿರುವ ಕುಟ್ ನಗರದ ಹೈಪರ್ ಶಾಪಿಂಗ್ ಮಾಲ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಐದು ಮಹಡಿಯ ಕಟ್ಟಡ ಹೊತ್ತಿ ಉರಿಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾಲ್‌ನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ವಾಸಿಟ್ ಪ್ರಾಂತ್ಯದ ಗವರ್ನರ್ ತಿಳಿಸಿದ್ದಾರೆ.
ಪ್ರಾಂತ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ನಡೆಸುವಂತೆ ಘೋಷಿಸಲಾಗಿದೆ. ಕಟ್ಟಡ ಮತ್ತು ಮಾಲ್ ಮಾಲೀಕರ ವಿರುದ್ಧ ದೂರು ದಾಖಲಿಸುವಂತೆ ಗರ್ವನರ್ ಸೂಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
























