ಕಾರ್ಕಳ : ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ (87) ಇಂದು ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ ನಿಧನರಾಗಿದ್ದಾರೆ.
ಜು.17ರಂದು ಮಧ್ಯಾಹ್ನ 12 ಗಂಟೆಗೆ ಶಾಸಕರ ಸ್ವಗೃಹಕ್ಕೆ ಪಾರ್ಥೀವ ಶರೀರ ತರಲಾಗುವುದು. ಸಂಜೆ ನಾಲ್ಕು ಗಂಟೆಗೆ ಅಂತಿಮ ವಿಧಿವಿಧಾನ ನಡೆಯಲಿದೆ. ಮೃತರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ.

