ಬೆಂಗಳೂರು: ರಾಜ್ಯದಲ್ಲಿ ವಾಹನಗಳ ಮೇಲೆ ಅನಧಿಕೃತವಾಗಿ ರಾಷ್ಟ್ರಧ್ವಜ ಅಥವಾ ಚಿಹ್ನೆಗಳನ್ನು ಬಳಕೆ ಮಾಡಿದಲ್ಲಿ ತಕ್ಷಣವೇ ಜಪ್ತಿ ಮಾಡಿ, ದಂಡ ವಸೂಲಿ ಮಾಡುವಂತೆ ಸರ್ಕಾರ ಆದೇಶ ನೀಡಿದೆ.
ಹೈಕೋರ್ಟ್ ನೀಡಿರುವ ತೀರ್ಪಿಗೆ ಅನುಗುಣವಾಗಿ ಮಹತ್ವವಾದ ಚಿಹ್ನೆಗಳು, ಧ್ವಜಗಳು, ಹೆಸರು, ಲೊಗೋ, ಲಾಂಛನ, ಮೊಹರುಗಳನ್ನು ಅನಧಿಕೃತವಾಗಿ ದುರ್ಬಳಕೆ ಮಾಡುವುದನ್ನು ತಡೆಯಲು ಈ ಆದೇಶ ಹೊರಡಿಸಲಾಗಿದೆ.
ಕೇಂದ್ರ ಸರ್ಕಾರ ಈ ಹಿಂದೆಯೇ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದು, ಸರ್ಕಾರದ ಅಧಾನದಲ್ಲಿರುವ ಎಲ್ಲಾ ಇಲಾಖೆಗಳು, ಸಂಸ್ಥೆಗಳು, ನಿಗಮ ಮಂಡಳಿಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಆಯೋಗಗಳು ನ್ಯಾಯಾಲಯದ ತೀರ್ಪಿನನ್ವಯ ಕಟ್ಟುನಿಟ್ಟಾಗಿ ನಡಿದುಕೊಳ್ಳುವಂತೆ ನೋಡಿಕೊಳ್ಳಲು ಹೇಳಿತ್ತು.
ರಾಷ್ಟ್ರ ಲಾಂಚನ ಅಥವಾ ರಾಷ್ಟ್ರೀಯ ಚಿಹ್ನೆಗಳನ್ನು ಅನಧಿಕೃತವಾಗಿ ಬಳಕೆ ಮಾಡಿದಲ್ಲಿ ಅಂತಹವರ ವಿರುದ್ಧ ಹೈಕೋರ್ಟ್ ತೀರ್ಪಿನನ್ವಯ ಕ್ರಮ ಕೈಗೆೊಳ್ಳುವುದಾಗಿಯೂ ಸರ್ಕಾರ ತಿಳಿಸಿದೆ.
























