ಬಸ್‌ ಪಲ್ಟಿಯಾಗಿ 25ಕ್ಕೂ ಹೆಚ್ಚು ಟೆಕ್ಕಿಗಳಿಗೆ ಗಾಯ

ಕುದುರೆಮುಖಕ್ಕೆ ಪ್ರವಾಸ ಹೊರಟಿದ್ದ ಬಸ್‌ ಅಪಘಾತ

ಚಿಕ್ಕಮಗಳೂರು: ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಟೆಕ್ಕಿಗಳು ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದೆ.

ಖಾಸಗಿ ಕಂಪನಿ ನೌಕರರು ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೀಕೆಂಡ್ ಹಿನ್ನೆಲೆ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿವ 40ಕ್ಕೂ ಹೆಚ್ಚು ಯುವಕ–ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್‍ಗೆ ಹೊರಟಿದ್ದರು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.





















































 
 

ಗಾಯಾಳುಗಳನ್ನು ಮೂಡಿಗೆರೆ ಹಾಗೂ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

error: Content is protected !!
Scroll to Top