ಬೆಳಗಾವಿ: KPCC ಅಧ್ಯಕ್ಷರ ಆಯ್ಕೆಯ ನಿರ್ಧಾರ ಹೈಕಮಾಂಡ್ನದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ರಾಜ್ಯಕ್ಕೆ ಆಗಮಿಸಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲಾ ಅವರ ಜೊತೆಗೆ ಕರ್ನಾಟಕದ ಅಭಿವೃದ್ಧಿ ವಿಚಾರವಾಗಿ ಮಾತನಾಡಲಾಗಿದೆ. ಹಾಗೆಯೇ ಅಭಿವೃದ್ಧಿಗಾಗಿ ಪ್ರತಿ ಶಾಸಕರಿಗೆ ಮೀಸಲಿಡಲಾದ ಹಣದ ಬಗ್ಗೆ ಚರ್ಚೆ ನಡೆಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಕೆಪಿಸಿಸಿ ಹೊಸ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಹಾಗೆ ಯಾವ ಚರ್ಚೆ ಸಹ ನಡೆಸಿಲ್ಲ. ಅದೆಲ್ಲಾ ಹೈಕಮಾಂಡ್ಗೆ ಬಿಟ್ಟದ್ದು. RCB ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಲಾಗಿದೆ. ಇದನ್ನು ಅಧ್ಯಯನ ಮಾಡಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಈ ಕಾರ್ಯಕ್ರಮದ ಆಯೋಜನೆಗೆ RCB ತಂಡದವರು ಯಾವುದೇ ಅನುಮತಿ ಪಡೆದಿಲ್ಲ ಎಂದು ಹೇಳಿದ್ದಾರೆ.
























