ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣ: SIT ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ. ಸಂಬಂಧಿಸಿದ ಹಾಗೆ ತನಿಖೆ ನಡೆಸಲು ರಾಜ್ಯ ಸರ್ಕಾರ SIT (ವಿಶೇಷ ತನಿಖಾ ತಂಡ) ವನ್ನು ರಚಿಸಿದೆ.

ಡಾ. ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ಒಟ್ಟು ನಾಲ್ಕು ಅಧಿಕಾರಿಗಳ ತಂಡವನ್ನು ರಚನೆ ಮಾಡಲಾಗಿದೆ. ಈ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಎಂ. ಎನ್. ಅನುಚೇತ್ ಮತ್ತು ಸೌಮ್ಯಲತಾ ಇದ್ದಾರೆ.

ತನ್ನನ್ನು ಬಳಸಿಕೊಂಡು ಧರ್ಮಸ್ಥಳದ ಸುತ್ತ ಹಲವಾರು ಹೆಣಗಳನ್ನು ಹೂಳಲಾಗಿದೆ ಎಂದು ಕೆಲ ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ ಹೇಳಿಕೊಂಡಿದ್ದ. ಬೆದರಿಕೆ ಒಡ್ಡುವ ಮೂಲಕ ನನ್ನಿಂದ ಈ ಕೆಲಸ ಮಾಡಿಸಿಕೊಂಡಿದ್ದು ಈ ಬಗ್ಗೆ ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ. ಆದ್ದರಿಂದ ನಾನು ಈ ಪ್ರಕರಣವನ್ನು ಕಾನೂನಿನ ಗಮನಕ್ಕೆ ತಂದಿರುವುದಾಗಿ ಹೇಳಿ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ. ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.





















































 
 

ಈ ಕೇಸಿಗೆ ‌ಸಂಬಂಧಿಸಿದಂತೆ SIT ತನಿಖೆಗೆ ಆಗ್ರಹಿಸಿ ಸಾರ್ವಜನಿಕ ವಲಯದಿಂದಲೂ ಕೂಗು ಕೇಳಿ ಬಂದಿತ್ತು. ಆದರೆ SIT ರಚಿಸುವುದಿಲ್ಲ ಎಂದು ಈ ಹಿಂದೆ ಹೇಳಿದ್ದ ಸಿ ಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಇದೀಗ ಈ ಪ್ರಕರಣವನ್ನು SIT ತನಿಖೆಗೆ ವಹಿಸಿದೆ.

error: Content is protected !!
Scroll to Top