ಖರ್ಗೆ ಪ್ರಧಾನಿ ಆಗಬಹುದು ಎಂದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ

ಬೆಂಗಳೂರು: ಕಾಂಗ್ರೆಸ್‌ಗೆ ದಲಿತರ ಮೇಲೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಬಿಜೆಪಿ ವ್ಯಂಗ್ಯ ಮಾಡುತ್ತದೆ. ನಮ್ಮ ಆಶಯ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಆಗಲಿ ಎಂಬುದೇ ಆಗಿದೆ ಎಂದು ಸಿ ಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಈ ಸೆಪ್ಟೆಂಬರ್ ತಿಂಗಳಲ್ಲಿ 75 ವರ್ಷ ತುಂಬಿ ಅವರು ಬಿಜೆಪಿ ನಿಯಮದಂತೆ ಅಧಿಕಾರ ತ್ಯಜಿಸಲಿದ್ದಾರೆ. ಇದು ರಾಜಕೀಯ ಬದಲಾವಣೆಗೆ ಕಾರಣವಾಗಬಹುದು. ಬಿಜೆಪಿಗೆ ಬೆಂಬಲ ನೀಡಿದ ಪಕ್ಷಗಳು ಹಿಂದೆ ಸರಿದು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದು ಖರ್ಗೆ ಪ್ರಧಾನಿ ಆಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಖರ್ಗೆ‌ಗೆ ಸರಿಸಾಟಿ ‌ನಾಯಕರು ಬೇರೆ ಯಾರೂ ಇಲ್ಲ. ಕೇಂದ್ರದಲ್ಲಿ ವಿ ಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಇದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ತ್ಯಾಗ ಮನೋಭಾವ ಇದೆ. ಹಾಗಾಗಿ ಹಿಂದೆ ಸೋನಿಯಾ ಗಾಂಧಿ ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿಯಾಗಲು ಅವಕಾಶ ನೀಡಿದಂತೆ, ಖರ್ಗೆ ಅವರಿಗೂ ಅವಕಾಶ ಸಿಗಬಹುದು ಎಂದಿದ್ದಾರೆ.





















































 
 
error: Content is protected !!
Scroll to Top