ನವದೆಹಲಿ: ಇಂದಿನಿಂದ ಸಂಸತ್ ಮಳೆಗಾಲದ ಅಧಿವೇಶನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಸರ್ವಪಕ್ಷಗಳ ಸಭೆ ನಡೆದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕಿರಣ್ ರಿಜಿಜು, ಕೇಂದ್ರ ಸರ್ಕಾರವು ಆಪರೇಷನ್ ಸಿಂಧೂರ್ ಸೇರಿದಂತೆ ಮುಖ್ಯ ವಿಷಯಗಳ ಜೊತೆಗೆ ಚರ್ಚೆ ನಡೆಸಲು ಸಿದ್ಧ. ಕೇಂದ್ರವು ಯಾವ ವಿಷಯದಿಂದಲೂ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸದನ ಸರಿಯಾಗಿ ಕೆಲಸ ಮಾಡುತ್ತಿದೆ ಎನ್ನುವುದನ್ನು ನಿರ್ಧರಿಸಲು ಸರ್ಕಾರ ಮತ್ತು ವಿಪಕ್ಷಗಳ ನಡುವೆ ಸಮನ್ವಯತೆ ಬೇಕು. ಸರ್ಕಾರ ಎಲ್ಲಾ ಪ್ರಶ್ನೆಗಳಿಗೂ ಸಂಸತ್ತಿನ ಒಳಗೆ ಉತ್ತರ ನೀಡುತ್ತದೆ. ಸಂಸತ್ತಿನ ಹೊರಗೆ ಅಲ್ಲ. ಸಂಸತ್ತಿನ ಸಮಯದಲ್ಲಿ ಸೂಕ್ತ ಪ್ರತಿಕ್ರಿಯೆ ನಮ್ಮಿಂದ ಬರುತ್ತದೆ ಎಂದು ಅವರು ನುಡಿದಿದ್ದಾರೆ.
























