ನ್ಯಾಯಾಲಯದಲ್ಲಿ ರಾಜಕೀಯ ಬೇಡ : ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ಕರ್ನಾಟಕ ಸರ್ಕಾರಕ್ಕೆ ದಂಡ

ನವದೆಹಲಿ: ಸಂಸದ ತೇಜಸ್ವಿ‌‌ ಸೂರ್ಯ ಅವರು ರೈತನ ಆತ್ಮಹತ್ಯೆಗೆ ಸಂಬಂಧಿಸಿದ ಹಾಗೆ ಸುಳ್ಳು ಸುದ್ದಿ ಹಬ್ಬಿದ್ದಾರೆ ಎಂದು ಅವರ ಮೇಲೆ ದಾಖಲಿಸಲಾದ ಕ್ರಿಮಿನಲ್ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಜೊತೆಗೆ ಈ‌ ಸಂಬಂಧ ಕರ್ನಾಟಕ ಸರ್ಕಾರಕ್ಕೆ ದಂಡ ವಿಧಿಸಿ ತೀರ್ಪಿತ್ತಿದೆ.

ತೇಜಸ್ವಿ ಸೂರ್ಯ ಅವರ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂ ಕೋರ್ಟ್ ಸಹ ತೇಜಸ್ವಿ ವಿರುದ್ಧದ ಪ್ರಕರಣ ರದ್ದು ಸರಿಯಾಗಿದೆ ಎಂದಿದ್ದು, ಇದರಿಂದ ಕರ್ನಾಟಕ ಸರ್ಕಾರಕ್ಕೆ ಮುಖಭಂಗವಾಗಿದೆ.





















































 
 

ಕರ್ನಾಟಕ ಸರ್ಕಾರದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರಿದ್ದ ನ್ಯಾಯಪೀಠ ನಿಮ್ಮ ರಾಜಕೀಯ ಚುನಾವಣೆಯಲ್ಲಿ ನಡೆಸಿ. ನ್ಯಾಯಾಲಯದಲ್ಲಿ ರಾಜಕೀಯ ಬೇಡ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಹಾಗೆಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ದಂಡ ವಿಧಿಸಿ ತೀರ್ಪಿತ್ತಿದೆ.

error: Content is protected !!
Scroll to Top