ದಾವಣಗೆರೆ: ಬಿಜೆಪಿಯ ರಾಜ್ಯಾಧ್ಯಕ್ಷರ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ರಾಜ್ಯಾಧ್ಯಕ್ಷರ ಬದಲಾವಣೆಯ ವಿಷಯ ನನಗೆ ತಿಳಿಯದು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರ ಬದಲಾವಣೆಯ ವಿಷಯ ಪಕ್ಷದ ವರಿಷ್ಠರಿಗೆ ಬಿಟ್ಟದ್ದು. ಬಿಜೆಪಿಯಲ್ಲಿ ಯಾವುದೇ ಟೀಂ ಇಲ್ಲ. ನಮ್ಮದು ಒಂದೇ ಹೈಕಮಾಂಡ್ ಮಾತ್ರ ಎಂದು ಅವರು ತಿಳಿಸಿದ್ದಾರೆ.
ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಅವರು ಬಿಜೆಪಿಗೆ ಮತ್ತೆ ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಅವರು ಮತ್ತೆ ಒಗ್ಗೂಡಬೇಕು ಎಂದು ಪೀಠಿಕೆ ಹಾಕಿದ್ದೇ ನಾನು. ಆದರೆ ಈಗ ಅವರಿಂದ ನನಗೆ ಒಳ್ಳೆಯ ಗಿಫ್ಟ್ ಸಿಕ್ಕಿದೆ ಎಂದು ನುಡಿದಿದ್ದಾರೆ.
ಧರ್ಮಸ್ಥಳ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದ್ದು, ಇದನ್ನು ಸಹ ಸೋಮಣ್ಣ ಸ್ವಾಗತಿಸಿದ್ದಾರೆ.
























