ಕರಾವಳಿಯಲ್ಲಿ ತೀವ್ರಗೊಂಡ ಮಳೆ : ಆರು ತಾಲೂಕುಗಳಲ್ಲಿ ಪಿಯುಸಿ ತನಕ ರಜೆ ಘೋಷಣೆ

ಬಂಟ್ವಾಳ : ಕರಾವಳಿಯಲ್ಲಿ ಮಳೆ ತೀವ್ರಗೊಂಡಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ, ಮೂಲ್ಕಿ, ಮೂಡುಬಿದಿರೆ, ಕಡಬ, ಉಳ್ಳಾಲ ತಾಲೂಕುಗಳಲ್ಲಿ ಶಾಲಾ ಮಕ್ಕಳಿಗೆ ರಜೆ ಘೋಷಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಜು.24ರ ಗುರುವಾರ ಬಂಟ್ವಾಳ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಮಂಗಳೂರು, ಬಂಟ್ವಾಳ, ಮೂಲ್ಕಿ, ಮೂಡುಬಿದಿರೆ ತಾಲೂಕುಗಳಲ್ಲಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.

error: Content is protected !!
Scroll to Top