ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ 44 ನೇ ವರ್ಷದ ಗಣೇಶ ಚತುರ್ಥಿಯ ಪೂರ್ವಸಿದ್ಧತೆಯ ಹಿನ್ನೆಲೆಯಲ್ಲಿ ವಿವೇಕಾನಂದ ಪ್ರತಿಮೆಯ ಬಳಿ 50 ಅಡಿ ಇರುವ ಭಗವಾಧ್ವಜವನ್ನು ಅಳವಡಿಸಲಾಯಿತು.

RSS ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ರವೀಂದ್ರ ಪಿ, ಯುವ ನಾಯಕ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಪುತ್ತೂರು ನಗರ ಮಂಡಲದ ಅಧ್ಯಕ್ಷ ನಿತೇಶ್ ಕಲ್ಲೇಗ ತೆಂಗಿನಕಾಯಿ ಒಡೆಯುವ ಮೂಲಕ ಗಣೇಶೋತ್ಸವದ ಪೂರ್ವ ತಯಾರಿಗೆ ಚಾಲನೆ ನೀಡಿದರು.
ಯುವ ವಕೀಲ ಪ್ರಜ್ವಲ್ ಸ್ವಾಗತಿಸಿದರು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
























