ಪುತ್ತೂರು – ಉಪ್ಪಿನಂಗಡಿ ರಸ್ತೆ ದುರಸ್ತಿ ತಕ್ಷಣ ಮಾಡದಿದ್ದಲ್ಲಿ ಬಿಜೆಪಿಯಿಂದ ಪ್ರತಿಭಟನೆ: ಸಂಜೀವ ಮಠಂದೂರ್

ಪುತ್ತೂರು: ನಗರದಿಂದ ಉಪ್ಪಿನಂಗಡಿಗೆ ಸಂಪರ್ಕಿಸುವ ರಸ್ತೆಯನ್ನು ಚತುಷ್ಪತ ರಸ್ತೆಯನ್ನಾಗಿ ಮಾಡಿ ರಾಜ್ಯ ಹೆದ್ದಾರಿಯಾಗಿ ಪರಿವರ್ತಿಸಲಾಗಿದೆ. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಆ ರಸ್ತೆಯನ್ನು ಸೂಕ್ತವಾಗಿ ನಿರ್ವಹಣೆ ಮಾಡದೆ ಪ್ರಯಾಣಿಕರು ಪರದಾಡುವಂತಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುತ್ತೂರಿನಿಂದ ‌ಸೇಡಿಯಾಪುವಿನ ವರೆಗೆ ರಸ್ತೆ ನಿರ್ವಹಣೆ ಇಲ್ಲದೆ ಜನರು ನಿತ್ಯ ಪರದಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಸರಿಪಡಿಸುವತ್ತ ತಕ್ಷಣವೇ ಗಮನ ಹರಿಸದೇ ಹೋದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ಮಠಂದೂರ್ ಎಚ್ಚರಿಕೆ ನೀಡಿದ್ದಾರೆ.





















































error: Content is protected !!
Scroll to Top