ನವದೆಹಲಿ: ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ಅಂಚೆ ಚೀಟಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಮುರ್ಮು, ರಾಣಿ ಚೆನ್ನಭೈರಾದೇವಿ ಅವರ ಧೈರ್ಯ, ಸ್ಥೈರ್ಯ, ಸಾಧನೆಯನ್ನು ನಾವು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು. ಇದೊಂದು ಅವಿಸ್ಮರಣೀಯ ಸಂದರ್ಭ ಎಂದು ತಿಳಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸಿದ್ದರು.
























