ಇಂದು ಕಾರ್ಗಿಲ್‌ ವಿಜಯ ದಿವಸ : ಭಾರತದ ಸೈನಿಕರ ಪರಾಕ್ರಮಕ್ಕೆ ಗೌರವ ಸಲ್ಲಿಸುವ ದಿನ

ಜಗತ್ತಿನ ಅತ್ಯಂತ ದುರ್ಗಮ ಪ್ರದೇಶದಲ್ಲಿ ನಡೆದ ಯುದ್ಧವನ್ನು ಗೆದ್ದು ಬೀಗಿದ ನಮ್ಮ ಸೈನಿಕರು

ಪುತ್ತೂರು : ಕುತಂತ್ರದಿಂದ ಭಾರತದ ಭೂಭಾಗವನ್ನು ಕಬಳಿಸಲು ಹೊಂಚು ಹಾಕಿದ್ದ ಪಾಕಿಸ್ತಾನವನ್ನು ನಮ್ಮ ಧೀರ ಸೈನಿಕರು ಜಗತ್ತಿನ ಅತ್ಯಂತ ದುರ್ಗಮ ಪ್ರದೇಶದ ಯುದ್ಧದಲ್ಲಿ ಸೋಲಿಸಿ ಹೆಡೆಮುರಿ ಕಟ್ಟಿ ಅದ್ಭುತ ಪರಾಕ್ರಮ ಮೆರೆದ ಕಾರ್ಗಿಲ್‌ ವಿಜಯ ದಿವಸ ಇಂದು. 1999ರ ಜುಲೈ 26ರಂದು ಕೊನೆಗೊಂದ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ಮೇಲೆ ಭಾರತದ ಸೇನೆ ಸಾಧಿಸಿದ ಗೆಲುವನ್ನು ಸ್ಮರಿಸಲು ಪ್ರತಿವರ್ಷ ಆಪರೇಷನ್ ಕಾರ್ಗಿಲ್‌ ವಿಜಯೋತ್ಸವ ಆಚರಿಸಲಾಗುತ್ತದೆ.

ಪಾಕಿಸ್ತಾನದ ವಿರುದ್ಧ ನಿರಂತರವಾಗಿ ಸುಮಾರು ಎರಡು ತಿಂಗಳು ನಡೆದ ಯುದ್ಧದಲ್ಲಿ ಭಾರತದ 500ಕ್ಕೂ ಹೆಚ್ಚು ಯೋಧರು ದೇಶಕ್ಕಾಗಿ ಹೋರಾಡಿ ಹುತಾತ್ಮರಾದರು. ಈ ಯುದ್ಧದಲ್ಲಿ ನಮ್ಮ ದೇಶಕ್ಕಾಗಿ ಮಡಿದ ಭಾರತೀಯ ಸೈನಿಕರನ್ನು ನೆನಪಿಸುವ, ಅವರ ಶೌರ್ಯ ಮತ್ತು ಪರಾಕ್ರಮಕ್ಕೆ ಗೌರವ ಸಲ್ಲಿಸುವ ದಿನ ಸಲ್ಲಿಸುವ ದಿನವಿದು.





















































 
 

ಕಾರ್ಗಿಲ್‌ ಯುದ್ಧ ಭಾರತದ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ದಿನ. ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನ ಇದಾಗಿದೆ. ಇದರ ನೆನಪಿಗಾಗಿ ಭಾರತದಲ್ಲಿ ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ ಎಂದು ಆಚರಿಸಲಾಗುತ್ತದೆ. ಕಾರ್ಗಿಲ್ ವಿಜಯ್ ದಿನದಂದು ಯುದ್ಧದಲ್ಲಿ ಹುತಾತ್ಮರಾದ ನೂರಾರು ಭಾರತೀಯ ಸೈನಿಕರಿಗೆ ಗೌರವ ನಮನಗಳನ್ನು ಸಲ್ಲಿಸಲಾಗುತ್ತದೆ.

ಪಾಕ್ ಹಾಗೂ ಭಾರತ ದೇಶಗಳ ಗಡಿಯಲ್ಲಿ ಯಾವುದೇ ಶಸ್ತಾಸ್ತ್ರ ಸಂಘರ್ಷ ನಡೆಯದಂತೆ ಶಿಮ್ಲಾ ಒಪ್ಪಂದಕ್ಕೆ ಎರಡೂ ದೇಶಗಳು ಸಹಿ ಹಾಕಿದ್ದವು. ಆದರೆ 1998ರಲ್ಲಿ ಎರಡೂ ರಾಷ್ಟ್ರಗಳು ಪರಮಾಣು ಪರೀಕ್ಷೆಗಳನ್ನು ನಡೆಸಿದವು. 1990ರ ದಶಕದಲ್ಲಿ ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆಗಳಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಯಿತು. ಈ ಸಮಸ್ಯೆಯನ್ನು ಪರಿಹರಿಸಲು ಭಾರತ ಮತ್ತು ಪಾಕಿಸ್ತಾನ ಫೆಬ್ರವರಿ 1999ರಲ್ಲಿ ಲಾಹೋರ್ ಘೋಷಣೆಗೆ ಸಹಿ ಹಾಕಿದವು. ಆ ಮೂಲಕ ಕಾಶ್ಮೀರ ಸಮಸ್ಯೆಗೆ ಶಾಂತಿಯುತ ಪರಿಹಾರವನ್ನು ಭರವಸೆ ನೀಡಿತಾದರೂ ಪಾಕಿಸ್ತಾನ ತನ್ನ ಕುತಂತ್ರಿ ಬುದ್ಧಿಯನ್ನು ತೋರಿಸಿತು. ಭಾರತದ ನಿಯಂತ್ರಣದಲ್ಲಿರುವ ಕಾರ್ಗಿಲ್ ಪ್ರದೇಶಕ್ಕೆ ಪಾಕಿಸ್ತಾನಿ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳ ಒಳನುಸುಳಿದರು. ಈ ಬಗ್ಗೆ ಗಮನಕ್ಕೆ ಬರುತ್ತಿದ್ದಂತೆ ಭಾರತ ಸರ್ಕಾರ ಆಪರೇಷನ್ ವಿಜಯ್ ಪ್ರಾರಂಭಿಸಿತು.

ಭಾರತೀಯ ಪಡೆಗಳಿಗೆ ಪಾಕಿಸ್ತಾನದ ಒಳನುಸುಳುವಿಕೆಯ ಬಗ್ಗೆ ಮೊದಲು ತಿಳಿದಿರಲಿಲ್ಲ, ಅದು ಸಣ್ಣ ಪ್ರಮಾಣದಲ್ಲಿದೆ ಎಂದು ಭಾವಿಸಿತ್ತು. ಪಾಕಿಸ್ತಾನ ತನ್ನ ಸೈನಿಕರನ್ನು ಉಗ್ರರ ವೇಷ ತೊಡಿಸಿದ ಕಾರ್ಗಿಲ್‌ಗೆ ರವಾನಿಸಿತ್ತು. ಕುರಿಗಾಹಿಯೊಬ್ಬ ಇವರ ಅನುಮಾನಾಸ್ಪದ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದಾಗಲೇ ನಮ್ಮ ಸೈನ್ಯಕ್ಕೆ ಪಾಕಿಸ್ಥಾನ ಭಾರತದ ಭೂಮಿಯನ್ನು ಆಕ್ರಮಿಸಿರುವುದು ತಿಳಿದದ್ದು. ಅಷ್ಟರಲ್ಲಾಗಲೇ ಪಾಕ್‌ ಸೈನಿಕರು ಕಾರ್ಗಿಲ್‌ನಲ್ಲಿ ಬಂಕರ್‌ ಮತ್ತಿತರ ವ್ಯವಸ್ಥೆಗಳನ್ನು ಮಾಡಿಕೊಂಡು ಯುದ್ಧಕ್ಕೆ ಪೂರ್ತಿ ಸಜ್ಜಾಗಿ ಕುಳಿತಿದ್ದರು.

ಆರಂಭದಲ್ಲಿ ಪಾಕಿಸ್ತಾನ ಸೇನೆಯು ಯುದ್ಧದಲ್ಲಿ ತಮ್ಮ ಪಾಲ್ಗೊಳ್ಳುವಿಕೆಯನ್ನು ಒಪ್ಪಿಕೊಳ್ಳಲಿಲ್ಲ ಮತ್ತು ಆಕ್ರಮಣಕ್ಕೆ ಕಾಶ್ಮೀರಿ ಉಗ್ರಗಾಮಿಗಳನ್ನು ದೂಷಿಸಿತು. ಆದರೆ ಆಗಿನ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಪರ್ವೇಜ್ ಮುಷಾರಫ್ ಅವರ ಹೇಳಿಕೆಗಳು ಯುದ್ಧದಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಸ್ಪಷ್ಟವಾಗಿದೆ ಸಾರಿ ಹೇಳಿತ್ತು.

ಕೊನೆಗೆ ಭಾರತವು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು ಪಾಕಿಸ್ತಾನದ ವಿರುದ್ಧ ಆಪರೇಷನ್ ವಿಜಯ್‌ಗಾಗಿ 20,000 ಸೈನಿಕರನ್ನು ಕಳುಹಿಸಿತು. ಪಾಕಿಸ್ತಾನಿ ಸೈನಿಕರನ್ನು ತನ್ನ ಭೂಪ್ರದೇಶದಿಂದ ಹೊರಹಾಕುವಲ್ಲಿ ಭಾರತೀಯ ಸೈನಿಕರು ಯಶಸ್ವಿಯಾದರು. 60 ದಿನಗಳಿಗಿಂತ ಹೆಚ್ಚು ಕಾಲ ನಡೆದ ಈ ಯುದ್ಧದಲ್ಲಿ 527 ಭಾರತೀಯ ಸೈನಿಕರು ದೇಶಕ್ಕಾಗಿ ಪ್ರಾಣ ತೆತ್ತರು. ಪಾಕ್ ಸೈನಿಕರನ್ನು ಹಿಮ್ಮೆಟ್ಟಿಸಿ ಭಾರತವು ವಿಜಯಶಾಲಿಯಾಯಿತು. ಆದರೆ ಈ ಯುದ್ಧವು ಜುಲೈ 26ರಂದು ಕೊನೆಗೊಂಡಿತು. ಈ ಯುದ್ಧದಲ್ಲಿ ವೀರ ಮರಣ ಹೊಂದಿದ ಸೈನಿಕರನ್ನು ಗೌರವಿಸುವ ನಿಟ್ಟಿನಲ್ಲಿ ಜು.26ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ.

ಕಾಶ್ಮೀರದಲ್ಲಿರುವ ಕಾರ್ಗಿಲ್‌ ಹಿಮಾಲಯದ ಬೆಟ್ಟಗುಡ್ಡಗಳಿಂದ ಆವೃತವಾದ ಪ್ರದೇಶ. ಕಾರ್ಗಿಲ್‌ ಕಾಶ್ಮೀರದ ರಾಜಧಾನಿ ಶ್ರೀನಗರದಿಂದ 205 ಕಿ.ಮೀ. ದೂರದಲ್ಲಿದೆ. ಲೇಹ್ ಮತ್ತು ಶ್ರೀನಗರವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 1 ಕಾರ್ಗಿಲ್ ಮೂಲಕ ಹಾದು ಹೋಗುತ್ತದೆ. ಈ ಪ್ರದೇಶದಲ್ಲಿ ಇರುವ ಏಕೈಕ ಹೆದ್ದಾರಿ ಇದಾಗಿದೆ. ಅಲ್ಲದೆ ವಿಶ್ವದ ಅತ್ಯಂತ ಎತ್ತರದಲ್ಲಿರುವ ಯುದ್ಧಭೂಮಿ ಸಿಯಾಚಿನ್‌ಗೂ ಸಂಪರ್ಕ ಕಲ್ಪಿಸುತ್ತದೆ ಈ ಹೆದ್ದಾರಿ.

ಚಳಿಗಾಲ ಮುಗಿದ ಬಳಿಕ ಇಲ್ಲಿಗೆ ಮತ್ತೆ ಗಡಿ ಕಾಯುವುದಕ್ಕೆ ಹೋಗುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿಯಾಗಿತ್ತು. 1999ರಲ್ಲಿ ಈ ಸಂದರ್ಭವನ್ನೇ ಬಳಸಿಕೊಂಡ ಪಾಕಿಸ್ತಾನ, ಕಾಶ್ಮೀರದ ಹೋರಾಟಗಾರರ ಹೆಸರಿನಲ್ಲಿ ಪಾಕ್‌ ಸೈನಿಕರು, ಭಾರತದ ಪ್ರಮುಖ ಭಾಗಗಳನ್ನು ತನ್ನ ವಶಕ್ಕೆ ಪಡೆದುಕೊಂಡಿತು.

ಆರಂಭದಲ್ಲಿ ಪಾಕಿಸ್ತಾನೀಯರು ಭಾರತದ ಒಳಗೆ ಸುಮಾರು ದೂರ ನುಸುಳಿದ್ದರು. ಆದರು ಅದು ಭಾರತೀಯ ಸೇನೆಯ ಅರಿವಿಗೆ ಬಂದಿರಲಿಲ್ಲ. ಆದರೆ ಪಾಕಿಸ್ತಾನಿಯರನ್ನು ಕಂಡ ಕಾಶ್ಮೀರದ ಕೆಲವು ಕುರಿಗಾಹಿ ಜನರು, ಭಾರತೀಯ ಸೇನೆಗೆ ವಿಷಯ ಮುಟ್ಟಿಸಿದ್ದರು. ತಕ್ಷಣವೇ ಕಾರ್ಯ ಪ್ರರುತ್ತಾರದ ಸೇನಾಧಿಕಾರಿಗಳು, ಐದು ಯೋಧರನ್ನು ಗಸ್ತು ತಿರುಗಲೆಂದು ಕಳುಹಿಸಿಕೊಟ್ಟರು.

ಆದರೆ ಆಕ್ರಮಣ ಮನಸ್ಥತಿಯಲ್ಲಿದ್ದ ಪಾಕ್‌ನ ಸೇನೆ, ಭಾರತದ ಆ ಐದು ಯೋದರನ್ನು ಚಿತ್ರಹಿಂಸೆ ನೀಡಿ ಕೊಂದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಭಾರತ, ತಕ್ಷಣವೇ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಲು ನಿರ್ಧರಿಸಿತು. ಇದಕ್ಕಾಗಿ ಸೇನೆಯನ್ನು ಸಿದ್ಧಗೊಳಿಸಿತು. ಭಾರತ ಸರ್ಕಾರ ಇಪ್ಪತ್ತು ಸಾವಿರ ಭಾರತೀಯ ಸೈನಿಕರನ್ನ ಸಜ್ಜುಗೊಳಿಸಿ ಮೇ 3ರಿಂದ ಆಪರೇಷನ್ ವಿಜಯ ಹೆಸರಿನಲ್ಲಿ ಕಾರ್ಯಚರಣೆ ಆರಂಭ ಮಾಡಿತು.

ಕಾರ್ಗಿಲ್ ವಿಜಯ್ ದಿವಸ್ ಭಾರತೀಯ ಪಾಲಿಗೆ ಮರೆಯದ ದಿನ. ಆದರೆ ಈ ಯುದ್ಧದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ಸೈನಿಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ದಿನವು ಬಹಳ ಮಹತ್ವ ಪೂರ್ಣ. ಹೀಗಾಗಿ ಈ ದಿನದಂದು ಭಾರತದ ಪ್ರಧಾನಿ ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸುತ್ತಾರೆ. ಭಾರತೀಯ ಸಶಸ್ತ್ರ ಪಡೆಗಳ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ. ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಾರ್ಗಿಲ್ ವಿಜಯ್ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ.

ದೇಶಾದ್ಯಂತ ಶಾಲಾ-ಕಾಲೇಜು, ಸಂಸಘ ಸಂಸ್ಥೆಗಳು ಕಾರ್ಗಿಲ್‌ ವಿಜಯ ದಿವಸದಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸುತ್ತವೆ. ನಿವೃತ್ತ ಸೈನಿಕರಿಗೆ ಸನ್ಮಾನ, ಹುತಾತ್ಮ ಸೈನಿಕರ ಸ್ಮರಣೆ ಇತ್ಯಾದಿ ಕಾರ್ಯಕ್ರಮಗಳು ನಡೆಯುತ್ತವೆ.

error: Content is protected !!
Scroll to Top