ಅಧಿಕಾರ ಹಂಚಿಕೆ ಆಗಲಿ : ಕಾಂಗ್ರೆಸ್‌ ಶಾಸಕ ಬಿ.ದೇವೇಂದ್ರಪ್ಪ

ಕಾಂಗ್ರೆಸ್‌ನಲ್ಲಿ ಮುಗಿಯದ ಕುರ್ಚಿ ಕಿತ್ತಾಟ

ಬೆಂಗಳೂರು: ಹೈಕಮಾಂಡ್‌ಎಷ್ಟೇ ತೇಪೆ ಹಾಕಿದರೂ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಬೇಗುದಿ ಶಮನವಾಗುತ್ತಿಲ್ಲ. ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಾಕಷ್ಟು ಚರ್ಚೆ ಮತ್ತು ತೀವ್ರ ಕುತೂಹಲ ಮೂಡಿಸುತ್ತಿವೆ. ಐದು ವರ್ಷ ನಾನೇ ಸಿಎಂ ಎಂದಿರುವ ಸಿದ್ದರಾಮಯ್ಯ ಪದೇಪದೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದೇಗುಲಗಳಿಗೆ ಸರಣಿ ಭೇಟಿ ನೀಡಿ ಪೂಜೆ, ಹೋಮ ಮಾಡಿಸುತ್ತಿದ್ದಾರೆ. ಈದರ ಮಧ್ಯೆ ಸಿಎಂ ಮತ್ತು ಡಿಸಿಎಂ ನಡುವೆ ಒಪ್ಪಂದ ಆಗಿದ್ದರೆ ಅಧಿಕಾರ ಹಂಚಿಕೆ ಆಗಲಿ ಎಂದು ಜಗಳೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ದೇವೇಂದ್ರಪ್ಪ ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

ಅಧಿಕಾರ ಹಂಚಿಕೆ ಆಗಲಿ ಎಂಬುವುದು ನನ್ನ ವೈಯಕ್ತಿಕ ಅಭಿಪ್ರಾಯ, ಆದರೆ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಸಿಎಂ ಸ್ಥಾನ ಖಾಲಿ ಇಲ್ಲ ಅಂದ್ಮೇಲೆ ಅದರ ಬಗ್ಗೆ ಚರ್ಚೆ ಅನಗತ್ಯ ಎಂದು ಹೇಳಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನನ್ನನ್ನು ಕರೆದು ಮಾತನಾಡಿಸಿದರು. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಎಸ್​.ಮಲ್ಲಿಕಾರ್ಜುನ ಕೂಡ ನನ್ನನ್ನು ಕರೆದು ಮಾತನಾಡಿದ್ದಾರೆ. ಆದರೆ ನಾನು ಯಾರ ವಿರುದ್ಧವೂ ಆರೋಪ ಮಾಡಲ್ಲ. ನನ್ನ ಜಗಳೂರು ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಆಗಬೇಕು ಅಷ್ಟೇ ಎಂದಿದ್ದಾರೆ.





















































 
 

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಪ್ರಾದೇಶಿಕ, ಜಾತಿವಾರು ‌ಲೆಕ್ಕಾಚಾರ ನಡೆದರೆ ನಾನು ಪ್ರಯತ್ನ ಮಾಡುವೆ. ನಾನೇನು ಸನ್ಯಾಸಿ ಅಲ್ಲ, ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

error: Content is protected !!
Scroll to Top