ಸಂಸ್ಕೃತ ಕಲಿತು ಭಾರತೀಯ ಸಂಸ್ಕೃತಿ ಮೈಗೂಡಿಸಿಕೊಳ್ಳಿ: ರಮೇಶ ಆಚಾರ್ಯ

ಪೊಳಲಿ: ದಕ್ಷಿಣಕನ್ನಡ ಜಿಲ್ಲಾ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕರ ಸಂಘದ ವತಿಯಿಂದ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಸಂಸ್ಕೃತದಲ್ಲಿ 125 ,124 ತೃತೀಯ ಭಾಷೆಯಲ್ಲಿ 100, 99 ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದ ಸರ್ವಮಂಗಳ ಸಭಾಭವನದಲ್ಲಿ ಸಂಪನ್ನಗೊಂಡಿತು.

ದೇವಸ್ಥಾನದ ಆನುವಂಶಿಕ ಮೊಕ್ತೇಸರ ವೇದಮೂರ್ತಿ ಮಾಧವ ಭಟ್ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಭಾಷಣಕಾರ ಮಂಗಳೂರಿನ ಶಾರದಾ ವಿದ್ಯಾಲಯದ ಉಪನ್ಯಾಸಕ ರಮೇಶ ಅಚಾರ್ಯ ಮಾತನಾಡಿ, ಸಂಸ್ಕೃತ ಕಲಿತು ಭಾರತೀಯತೆ ಮೈಗೂಡಿಸಿಕೊಳ್ಳಿ. ಆ ಮೂಲಕ ಎಲ್ಲರಿಗೂ ಅರಿವಿನ ದೀವಿಗೆಯಾಗಿ ಎಂದು ಹೇಳಿದರು.





















































 
 

ದಕ್ಷಿಣ ಕನ್ನಡ ಜಿಲ್ಲೆಯ 39 ಶಾಲೆಗಳ 310 ವಿದ್ಯಾರ್ಥಿಗಳಿಗೆ ಶಾಲು, ಪ್ರಮಾಣಪತ್ರ, ಪುಸ್ತಕ ಸ್ಮರಣಿಕೆ ನೀಡಿ ಅಭಿನಂದನೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ರಘು ಬೀಜೂರು, ಸೂರ್ಯ ಪ್ರಕಾಶ ಉಡುಪ ಹಾಗೂ ಶಿವರಾಮ ಭಟ್ ಇವರನ್ನು ಗೌರವಿಸಲಾಯಿತು.

ಶಾಸಕ ರಾಜೇಶ್ ನಾಯ್ಕ ಉಳಿಪಾಡಿಗುತ್ತು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಮಂಜಯ್ಯ ಶೆಟ್ಟಿ, ಕೃಷಿ ಪತ್ತಿನ ಸಂಘದ ಅಧ್ಯಕ್ಷ ವೆಂಕಟೇಶ ನಾವಡ ಉಪಸ್ಥಿತರಿದ್ದರು.

ವೆಂಕಟೇಶ್ ಪ್ರಸಾದ್ ಪುರಸ್ಕೃತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ರಘು ಬಿಜೂರು ಇವರ ಪ್ರಾರ್ಥಿಸಿದರು. ಜಿಲ್ಲಾ ಸಂಸ್ಕ್ರತ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ ಭಟ್ ಕಲ್ಲಡ್ಕ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಂಸ್ಕೃತ ಸಂಘದ ಕಾರ್ಯದರ್ಶಿ ವಿದ್ವಾನ್ ಅನಂತರಾಮ್ ಐತಾಳ್ ಕಾರ್ಯಕ್ರಮ ನಿರ್ವಹಿಸಿದರು. ವೆಂಕಟ್ರಮಣ ಕೆರೆಗದ್ದೆ ವಂದಿಸಿದರು.

error: Content is protected !!
Scroll to Top