ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ಗೆ ಪಹಲ್ಗಾಮ್ ದಾಳಿಯಲ್ಲಿ ಭಾಗವಹಿಸಿದ ಮೂವರು ಶಂಕಿತ ಪಾಕ್ ಉಗ್ರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಮೃತ ಉಗ್ರರಿಂದ ಗ್ರೆನೇಡ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಲಿಡ್ವಾಸ್ ಪ್ರದೇಶದಲ್ಲಿ ಮೂವರು ಉಗ್ರರು ನೆಲೆ ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಶಸ್ತ್ರ ಪಡೆಗಳು ದಾಳಿ ನಡೆಸಿ ಈ ಎನ್ಕೌಂಟರ್ ನಡೆಸಿದೆ.
ಆಪರೇಷನ್ ಮಹಾದೇವ್ ಹೆಸರಿನಲ್ಲಿ ಈ ಕಾರ್ಯಾಚರಣೆಯನ್ನು ಸೇನೆ, ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ನಡೆಸಿವೆ. ಎರಡು ದಿನಗಳ ಹಿಂದಷ್ಟೇ ದಚಿಗಮ್ ಕಾಡಿನಲ್ಲಿ ಅನುಮಾನಾಸ್ಪದ ಸಂವಹನಗಳನ್ನು ಭದ್ರತಾ ಪಡೆಗಳು ಪತ್ತೆ ಮಾಡಿದ್ದವು. ಸ್ಥಳೀಯ ಅಲೆಮಾರಿಗಳ ಮಾಹಿತಿಯನ್ವಯ ಈ ಕಾರ್ಯಾಚರಣೆ ನಡೆದಿದೆ.
























