ಮೈಸೂರಿನಲ್ಲಿ ವಶಪಡಿಸಿಕೊಂಡದ್ದು ಬರೋಬ್ಬರಿ 390 ಕೋಟಿ. ರೂ. ಡ್ರಗ್ಸ್‌

ಗ್ಯಾರೇಜ್‌ನ ಒಳಗಿತ್ತು ಮಾದಕ ವಸ್ತು ತಯಾರಿಸುವ ಕಾರ್ಖಾನೆ

ಮುಂಬೈ: ಮುಂಬೈ ಪೊಲೀಸರು ಭಾನುವಾರ ಮೈಸೂರಿನ ಹೊರವಲಯದಲ್ಲಿ ವಶಪಡಿಸಿಕೊಂಡಿರುವ ಮಾದಕವಸ್ತು ಮೌಲ್ಯ ಬರೋಬ್ಬರಿ 390 ಕೋ. ರೂ.. ಭಾರಿ ಪ್ರಮಾಣದ ಡ್ರಗ್ಸ್‌ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ಒಟ್ಟು 390 ಕೋಟಿ ರೂ. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್‌ ಡ್ರಗ್ಸ್‌ ವಶಪಡಿಸಿಕೊಂಡು 8 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಉಪ ಪೊಲೀಸ್ ಆಯುಕ್ತರ ದತ್ತಾ ನಲವಾಡೆ, ಮೈಸೂರು ದಾಳಿಗೂ ಮುಂಚೆ 8 ಕೋಟಿ ರೂ. ಮೌಲ್ಯದ 5 ಕೆಜಿ ಮಫೆಡ್ರೋನ್‌ ಡ್ರಗ್ಸ್‌ ಸಿಕ್ಕಿತ್ತು. ಮೈಸೂರು ದಾಳಿ ನಂತರ 187 ಕೆಜಿ ಮೆಥೆಡ್ರೋನ್‌ ಡ್ರಗ್ಸ್‌ ಸಿಕ್ಕಿದ್ದು, ಅದರ ಮೌಲ್ಯ 382 ಕೋಟಿ ರೂಪಾಯಿ. ಒಟ್ಟಾರೆ 390 ಕೋಟಿ ರು. ಮೌಲ್ಯದ 192 ಕೆಜಿ ಡ್ರಗ್ಸ್‌ ಇಡೀ ಪ್ರಕರಣದಲ್ಲಿ ಈವರೆಗೆ ಸಿಕ್ಕಿದೆ ಎಂದಿದ್ದಾರೆ.





















































 
 

ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈಯ ಸಾಕಿನಾಕಾದಲ್ಲಿ 52 ಗ್ರಾಂ ಮೆಫೆಡ್ರೋನ್‌ನೊಂದಿಗೆ ವ್ಯಕ್ತಿಯನ್ನು ಬಂಧಿಸಿದ ನಂತರ ಪ್ರಕರಣದ ತನಿಖೆ ಪ್ರಾರಂಭವಾಯಿತು. ಆತನ ವಿಚಾರಣೆಯ ಸಮಯದಲ್ಲಿ ಪೊಲೀಸರು ಇನ್ನೂ ಮೂವರು ವ್ಯಕ್ತಿಗಳನ್ನು ಪತ್ತೆಹಚ್ಚಿದರು. ಅವರಿಂದ 8 ಕೋಟಿ ರೂ. ಮೌಲ್ಯದ 4.53 ಕಿಲೋಗ್ರಾಂ ಮೆಫೆಡ್ರೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಈ ಜಾಲದ ಕುರಿತು ಹೆಚ್ಚಿನ ತನಿಖೆ ನಡೆಸಿದಾಗ ಜು.25ರಂದು ಬಾಂದ್ರಾ ರಿಕ್ಲಮೇಶನ್‌ನ ಸಲೀಂ ಇಮ್ತಿಯಾಜ್ ಶೇಖ್ ಅಲಿಯಾಸ್ ಸಲೀಂ ಲ್ಯಾಂಡ್ಗಾ (45) ಬಂಧನಕ್ಕೆ ಒಳಗಾದ. ಆತ ನೀಡಿದ ಮಾಹಿತಿ ಆಧರಿಸಿ ಮೈಸೂರಿಗೆ ಪೊಲೀಸರು ಹೋದರು. ಮೈಸೂರು ರಿಂಗ್‌ ರಸ್ತೆಯ ಕಟ್ಟಡದ ಮುಂಭಾಗ ಹೋಟೆಲ್ ಮತ್ತು ಗ್ಯಾರೇಜ್‌ನಂತೆ ಕಾಣುತ್ತಿತ್ತು. ಆದರೆ ಅದನ್ನು ಪ್ರವೇಶಿಸಿದಾಗ ನಮಗೆ ಮೆಫೆಡ್ರೋನ್ ಉತ್ಪಾದನಾ ಘಟಕ ಸಿಕ್ಕಿತು. ಇಲ್ಲಿಂದ ಅಕ್ರಮವಾಗಿ ಮುಂಬೈ ಮತ್ತು ಪಕ್ಕದ ಜಿಲ್ಲೆಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಒಟ್ಟಾರೆಯಾಗಿ ನಾವು 8 ಜನರನ್ನು ಬಂಧಿಸಿದ್ದೇವೆ ಮತ್ತು 390 ಕೋಟಿ ರೂ. ಮೌಲ್ಯದ 192 ಕೆಜಿ ಮೆಫೆಡ್ರೋನ್ ವಶಪಡಿಸಿಕೊಂಡಿದ್ದೇವೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಕಾರ್ಯಾಚರಣೆ ಜುಲೈ 26ರಂದು ನಡೆದಿದ್ದು, ಶೇಖ್ ಜೊತೆಗೆ ಇನ್ನೂ ಮೂರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇದು ದೊಡ್ಡ ಸರಪಳಿಯಾಗಿದ್ದು, ಹೆಚ್ಚಿನ ಬಂಧನವಾಗುವ ಸಾಧ್ಯತೆಯಿದೆ. ಮೆಫೆಡ್ರೋನ್ ತಯಾರಿಸಲು ಅವರು ಎಲ್ಲಿಂದ ಮೂಲವಸ್ತು ಪಡೆದರು ಎಂಬುದನ್ನು ನಾವು ಪರಿಶೀಲಿಸುತ್ತಿದ್ದೇವೆ. ಇಲ್ಲಿಯವರೆಗೆ ಬಂಧಿಸಲಾದ 8 ಜನರ ಮೇಲೆ ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ (ಎನ್‌ಡಿಪಿಎಸ್‌) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ನಲವಾಡೆ ತಿಳಿಸಿದ್ದಾರೆ.

error: Content is protected !!
Scroll to Top