ಪಹಲ್ಗಾಮ್ ದಾಳಿ ನಡೆಸಿದ ಮೂವರು ಉಗ್ರರ ಹತ್ಯೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನವದೆಹಲಿ: ಪಹಲ್ಗಾಮ್ ದಾಳಿ ನಡೆಸಿದ ಮೂವರು ಉಗ್ರರನ್ನು ಜಮ್ಮು ಕಾಶ್ಮೀರದಲ್ಲಿ ಆಪರೇಷನ್ ಮಹಾದೇವ್ ನಡೆಸಿ ಭದ್ರತಾ ಪಡೆಗಳು ಯಮಪುರಕ್ಕೆ ಅಟ್ಟಿರುವುದಾಗಿ ಲೋಕಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ನೀಡಿದ್ದಾರೆ.

ಭಾರತೀಯ ಸೇನೆ, ಸಿಆರ್‌ಪಿಎಫ್, ಜೆ&ಕೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕೊಲ್ಲಲ್ಪಟ್ಟ ಉಗ್ರರನ್ನು ಸುಲೇಮಾನ್ ಯಾನೆ ಫೈಜರ್, ಅಫ್ಘಾನಿ ಮತ್ತು ಜಿಬ್ರಾನ್ ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು, ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಗುಂಡುಗಳು ಪಹಲ್ಗಾಮ್ ದಾಳಿಯಲ್ಲಿ ನಡೆಸಿದ ಗುಂಡುಗಳೇ ಆಗಿವೆ ಎಂದು ವಿಧಿವಿಜ್ಞಾನ ತಜ್ಞರು ಖಚಿತಪಡಿಸಿದ್ದಾಗಿಯೂ ಅವರು ತಿಳಿಸಿದ್ದಾರೆ.





















































 
 
error: Content is protected !!
Scroll to Top