ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸಹಿತ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ
ಬೆಂಗಳೂರು : ಸುಮಾರು 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ಆಗಸ್ಟ್ 5ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧಾರ ಮಾಡಿದ್ದು, ಈಗಾಗಲೇ ಮುಖ್ಯಮಂತ್ರಿ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ.
ಸಾರಿಗೆ ನೌಕರರ ಪ್ರಮುಖ ಎರಡು ಬೇಡಿಕೆಗಳೆಂದರೆ ಬಾಕಿ ವೇತನ ಬಿಡುಗಡೆ ಮತ್ತು ಹೊಸ ವೇತನದಲ್ಲಿ ಪರಿಷ್ಕರಣೆ ಮಾಡಬೇಕು ಎಂಬುದಾಗಿದೆ. ಇದನ್ನು ಶೀಘ್ರ ಮಾಡುವಂತೆ ನೌಕರರು ಆಗ್ರಹಿಸಿದ್ದಾರೆ. ಮಾಡದಿದ್ದರೆ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದು ಬಹುತೇಕ ಪಕ್ಕಾ ಆಗಿದೆ.
ಎಸ್ಮಾ, ವಜಾಗೊಳಿಸುವ ತಂತ್ರಗಳಿಗೆ ಹೆದರುವ ಮಾತೇ ಇಲ್ಲ ಎಂದು ಫ್ರೀಡಂ ಪಾರ್ಕ್ನಲ್ಲಿ ಸಾಮೂಹಿಕ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.
























