ಕಾಫಿರ್​ಗಳ ಮೇಲೆ ದಾಳಿ, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ : ಭಯಾನಕವಾಗಿದೆ ಲೇಡಿ ಟೆರರಿಸ್ಟ್‌ ಚಟುವಟಿಕೆ

ಆನ್‌ಲೈನ್‌ ಮೂಲಕ ಭಯೋತ್ಪಾದಕ ಚಟುವಟಿಕೆ ನಡೆಸುತ್ತಿದ್ದ ಶಮಾ ಪರ್ವೀನ್‌ ಅನ್ಸಾರಿ

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಸೆರೆಯಾಗಿರುವ ಲೇಡಿ ಟೆರರಿಸ್ಟ್‌ ಶಮಾ ಪರ್ವೀನ್ ಅನ್ಸಾರಿ ಅಲ್‌ಖೈದಾ ಸಂಘಟನೆಯ ಸಿದ್ಧಾಂತ ಪ್ರಚಾರಕಳಾಗಿದ್ದಳು. ಕಾಫಿರರನ್ನು ಕೊಲ್ಲುವುದು, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ ಎಬ್ಬಿಸುವುದು, ಕೋಮು ಗಲಭೆ ಸೃಷ್ಟಿಸಿ ಅಶಾಂತಿ ಉಂಟು ಮಾಡುವುದು ಮುಂತಾದ ಕೆಲಸಗಳನ್ನು ಮಾಡಲು ಆಕೆಯನ್ನು ನೇಮಿಸಿಕೊಳ್ಳಲಾಗಿತ್ತು ಎಂಬ ಭಯಾನಕ ವಿಚಾರ ಹೊರಬಿದ್ದಿದೆ.

ಅಲ್ ಖೈದಾ ಉಗ್ರ ಸಂಘಟನೆ ಪರ ಬೆಂಗಳೂರಿನಿಂದ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಮಾ ಪರ್ವೀನ್ ಅನ್ಸಾರಿ ಎಂಬ ಮಹಿಳೆಯನ್ನು ನಿನ್ನೆ ಗುಜರಾತ್ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗುಜರಾತ್ ಎಟಿಎಸ್ ಆಕೆಯನ್ನು ಬಂಧಿಸಿ ಆಕೆಯ ಉಗ್ರ ಚಟುವಟಿಕೆ ಕುರಿತಾದ ಅನೇಕ ಮಾಹಿತಿಗಳನ್ನು ಬಯಲಿಗೆಳೆದಿದೆ.





















































 
 

ಶಮಾ ಪರ್ವೀನ್ ಅನ್ಸಾರಿ ಜಾರ್ಖಂಡ್ ಮೂಲದವಳಾಗಿದ್ದು, ಬೆಂಗಳೂರಿನ ಆರ್‌ಟಿ ನಗರದಲ್ಲಿ ತಾಯಿ, ಸಹೋದರನ ಜೊತೆ ವಾಸವಿದ್ದಳು. ಇಲ್ಲಿದ್ದುಕೊಂಡೇ ಆನ್​ಲೈನ್ ಮೂಲಕ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದಳು. ಪ್ರಚೋದನಾಕಾರಿ ಸಂದೇಶಗಳನ್ನು ಹಂಚುತ್ತಿದ್ದಳು.

ಎಟಿಎಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಶಮಾ ಪರ್ವೀನ್ ಅನ್ಸಾರಿ ಭಾರತ ಸರ್ಕಾರದ ವಿರುದ್ಧ ‘ಸಶಸ್ತ್ರ ಕ್ರಾಂತಿ ಅಥವಾ ಜಿಹಾದ್’ಗೆ ಕರೆ ನೀಡುವ ವಿಷಯವನ್ನು ಪ್ರಸಾರ ಮಾಡಲು ಡಿಜಿಟಲ್ ವೇದಿಕೆಗಳನ್ನು ಬಳಸುತ್ತಿದ್ದಳು. ಆಕೆಯ ಚಟುವಟಿಕೆಗಳು ಕೇವಲ ಸೈದ್ಧಾಂತಿಕ ಪ್ರಚಾರಕ್ಕಷ್ಟೇ ಸೀಮಿತವಾಗಿರಲಿಲ್ಲ. ಧಾರ್ಮಿಕ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಪ್ರಚೋದನಕಾರಿ ಸಂದೇಶಗಳನ್ನು ಹರಡಲು ಆಕೆ ಸಾಮಾಜಿಕ ಮಾಧ್ಯಮವನ್ನು ಸಕ್ರಿಯವಾಗಿ ಬಳಸುತ್ತಿದ್ದಳು.

10 ಸಾವಿರಕ್ಕೂ ಹೆಚ್ಚು ಫಾಲೋವರ್ಸ್

ಶಮಾ ಪರ್ವೀನ್ ಅನ್ಸಾರಿ ಎರಡು ಫೇಸ್‌ಬುಕ್ ಪುಟಗಳು ಮತ್ತು ಒಂದು ಇನ್‌ಸ್ಟಾಗ್ರಾಮ್ ಖಾತೆಯನ್ನು ನಿರ್ವಹಿಸುತ್ತಿದ್ದಳು. ಒಟ್ಟಾರೆಯಾಗಿ 10,000ಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಳು. ಈ ವೇದಿಕೆಗಳ ಮೂಲಕ, ಅಲ್ ಖೈದಾ ಮತ್ತು ಇತರ ಮೂಲಭೂತವಾದಿ ಪ್ರಚಾರಕರಿಗೆ ಸಂಬಂಧಿಸಿದ ವಿಷಯವನ್ನು ಹಂಚಿಕೊಂಡಿದ್ದಳು ಎಂದು ಎಟಿಎಸ್‌ ಮೂಲ ತಿಳಿಸಿದೆ.

ಎಕ್ಯೂಐಎಸ್ (ಅಲ್ ಖೈದಾ ಇಂಡಿಯನ್ ಸಬ್ ಕಾಂಟಿನೆಂಟ್) ನಾಯಕ ಮೌಲಾನಾ ಅಸಿಮ್ ಉಮರ್, ಹತ್ಯೆಗೀಡಾದ ಅಲ್-ಖೈದಾ ಉಗ್ರ ಅನ್ವರ್ ಅಲ್-ಅವ್ಲಾಕಿ ಮತ್ತು ಲಾಹೋರ್‌ನ ಲಾಲ್ ಮಸೀದಿಯ ಮೌಲಾನಾ ಅಬ್ದುಲ್ ಅಜೀಜ್ ಭಾಷಣಗಳು ಮತ್ತು ವೀಡಿಯೊಗಳನ್ನು ಪರ್ವೀನ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಳು. ಘಜ್ವಾ-ಎ-ಹಿಂದ್‌ನಂತಹ ವಿಷಯಗಳನ್ನು ಪ್ರಚಾರ ಮಾಡಿದ್ದಳು.
ಕಾಫಿರ್‌ಗಳ ಮೇಲೆ ದಾಳಿಗೆ ಕರೆ ನೀಡಿ ಮತ್ತು ಭಾರತ ಸರ್ಕಾರವನ್ನು ಉರುಳಿಸಲು ಪ್ರತಿಪಾದಿಸಿದ ಸಂದೇಶಗಳನ್ನೂ ಹಂಚಿಕೊಂಡಿದ್ದಳು. ಪಾಕಿಸ್ತಾನಿ ಸಂಸ್ಥೆಗಳೊಂದಿಗೆ ಫೋನ್ ಮತ್ತು ಇಮೇಲ್ ಮೂಲಕ ನಿರಂತರ ಸಂಪರ್ಕದಲ್ಲಿರುವುದು ತನಿಖೆಯಿಂದ ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ ಆರಂಭದಲ್ಲಿ ಎಟಿಎಸ್ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯ ಸಂದರ್ಭದಲ್ಲಿ ಈಕೆಯ ಸಂಚುಗಳ ಬಗ್ಗೆ ತಿಳಿದುಬಂದಿತ್ತು.

ಗುಜರಾತ್ ಎಟಿಎಸ್ ಜುಲೈ 23ರಂದು ದೆಹಲಿ, ನೋಯ್ಡಾ, ಅಹಮದಾಬಾದ್ ಮತ್ತು ಮೋಡಸಾದ ನಾಲ್ವರನ್ನು ಎಕ್ಯೂಐಎಸ್‌ ಪರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಮೂಲಭೂತವಾದಿ ಮತ್ತು ಜಿಹಾದಿ ಪ್ರಚಾರದ ವೀಡಿಯೊಗಳನ್ನು ಹಂಚಿಕೊಂಡ ಆರೋಪದ ಮೇಲೆ ಬಂಧಿಸಿತ್ತು. ಈ ವೀಡಿಯೊಗಳು ಭಾರತೀಯ ಮುಸ್ಲಿಂ ಯುವಕರನ್ನು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತಿರಸ್ಕರಿಸಲು ಮತ್ತು ಸಶಸ್ತ್ರ ದಂಗೆಯ ಮೂಲಕ ಷರಿಯಾ (ಇಸ್ಲಾಮಿಕ್ ಕಾನೂನು) ಹೇರಲು ಪ್ರಚೋದಿಸುವ ಗುರಿಯನ್ನು ಹೊಂದಿವೆ ಎಂದು ಎಟಿಎಸ್ ಹೇಳಿದೆ.

error: Content is protected !!
Scroll to Top