ಬಾಲಕನ ಅಪಹರಣ, ಕೊಲೆ: ಆರೋಪಿಗಳು ಪೊಲೀಸ್‌ ವಶಕ್ಕೆ

ಬನ್ನೇರುಘಟ್ಟ: ಬಾಲಕ ನಿಶ್ಚಿತ್‌ನನ್ನು ಅಪಹರಿಸಿ, ಪೆಟ್ರೋಲ್ ಹಾಕಿ ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಇಬ್ಬರು ಆರೋಪಿಗಳು ಪೊಲೀಸ್ ಬಲೆಗೆ ಬಿದ್ದಿದ್ದಾರೆ.

ಆರೋಪಿಗಳಾದ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಅವರ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಬನ್ನೇರುಘಟ್ಟದ ಕಗ್ಗಲಿಪುರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿರುವ ಸ್ಥಳದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಬಂಧಿಸಲು ತೆರಳಿದ್ದು, ಈ ಸಂದರ್ಭ ಆರೋಪಿಗಳು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವುದಾಗಿದೆ.

ಬಂಧಿತ ಆರೋಪಿಗಳಿಗೆ ಜಯನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿಶ್ಚಿತ್ ಕಿಡ್ನಾಪ್, ಕೊಲೆಗೆ ನಿಖರ ಕಾರಣ ಇನ್ನಷ್ಟೇ‌ ತಿಳಿದು ಬರಬೇಕಾಗಿದೆ.





















































 
 
error: Content is protected !!
Scroll to Top