ತುಳುವಿಗೆ ಅಧಿಕೃತ ಭಾಷೆ ಸ್ಥಾನ ಅಧ್ಯಯನ ನಡೆಸಲು ಸಮಿತಿ ರಚಿಸಿದ ಸರ್ಕಾರ

ಆಂಧ್ರ ಪ್ರದೇಶಕ್ಕೆ ತೆರಳಿ ಮಾನದಂಡಗಳ ಕುರಿತು ಅಧ್ಯಯನ ನಡೆಸಲಿರುವ ಸಮಿತಿ

ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳ ಬಗ್ಗೆ ಆಂಧ್ರ ಪ್ರದೇಶಕ್ಕೆ ತೆರಳಿ ಅಧ್ಯಯನ ನಡೆಸಲು ರಾಜ್ಯ ಸರಕಾರ ಸಮಿತಿ ರಚಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರ ಸಹಿತ 5 ಮಂದಿಯ ತಂಡವನ್ನು ಎರಡನೇ ಭಾಷೆಯನ್ನು ಅಧಿಕೃತ ಭಾಷೆ ಎಂದು ಘೋಷಿಸಲು ಅನುಸರಿಸಿರುವ ಮಾನದಂಡಗಳ ಅಧ್ಯಯನ ಮಾಡುವ ಸಲುವಾಗಿ ರಚನೆ ಮಾಡಲಾಗಿದೆ.





















































 
 

ಆಂಧ್ರ ಪ್ರದೇಶಕ್ಕೆ ಅಧ್ಯಯನ ನಡೆಸಲು ನಿಯೋಜಿಸಿರುವ ಸಮಿತಿಯ ಅಧ್ಯಕ್ಷರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯಿತ್ರಿ ಕೆ.ಎಂ. ನಿಯೋಜಿತರಾಗಿದ್ದು, ಕಾನೂನು ಇಲಾಖೆಯ ಉಪಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪಕಾರ್ಯದರ್ಶಿ ಮೂರ್ತಿ ಕೆ.ಎನ್, ತುಳು ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹಾಗೂ ಯಕ್ಷಗಾನ ಅಕಾಡಮಿಯ ಸದಸ್ಯ ಸುಧಾಕರ ಶೆಟ್ಟಿ ಈ ಸಮಿತಿಯ ಸದಸ್ಯರಾಗಿರುತ್ತಾರೆ.

ಈ ಹಿಂದೆ ಆಂಧ್ರ ಪ್ರದೇಶದಲ್ಲಿರುವ ಇತರ ಭಾಷೆಯನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಅಂಗೀಕಾರ ಮಾಡಿರುವ ಬಗ್ಗೆ ಮಾಹಿತಿಯನ್ನು ತರಿಸಿಕೊಳ್ಳಲಾಗಿತ್ತು. ಇದೀಗ ಆಂಧ್ರ ಪ್ರದೇಶದಲ್ಲಿ ಎರಡನೇ ಭಾಷೆ ಯನ್ನು ಯಾವ ಸ್ವರೂಪ, ಪ್ರಮಾಣದಲ್ಲಿ ಅಧಿಕೃತ ಭಾಷೆ ಎಂದು ಜಾರಿಗೊಳಿಸಲಾಗಿದೆ ಎಂಬುದನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ಸರಕಾರ ಈ ಸಮಿತಿಯನ್ನು ರಚಿಸಿ ಮೂರು ತಿಂಗಳೊಳಗೆ ವರದಿ ನೀಡುವಂತೆ ಆದೇಶಿಸಿದೆ.

error: Content is protected !!
Scroll to Top