ನವದೆಹಲಿ: ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆ. 9 ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನ ನಿಗದಿ ಮಾಡಿದೆ.
ಚು. ಆಯೋಗದ ಪ್ರಕಾರ ಆ. 7 ರಂದು ಉಪರಾಷ್ಟ್ರಪತಿ ಚುನಾವಣೆಯ ಅಧಿಸೂಚನೆ ಬಿಡುಗಡೆಯಾಗಲಿದೆ. ಆ. 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆ.22 ರಿಂದ ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ. ಆ. 25 ರ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ಇದೆ.
ಸೆ. 9 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಚುನಾವಣೆ ನಡೆಯಲಿದೆ. ಅದೇ ದಿನ ಮತ ಎಣಿಕೆ ಕಾರ್ಯ ಮತ್ತು ಫಲಿತಾಂಶ ಪ್ರಕಟವಾಗಲಿದೆ.
























