ಪುತ್ತೂರು : ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಪುತ್ತೂರು : ನ್ಯಾಯಾಲಯದಿಂದ ಜಾಮೀನು ಪಡೆದ ಬಳಿಕ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿರುವ ಪುತ್ತೂರು ಪೊಲೀಸರು ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಮಹಮ್ಮದ್ ಹನೀಫ್ (55) ಎಂದು ಗುರುತಿಸಲಾಗಿದೆ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 35/2001 ಕಲಂ: 379 ಜೊತೆಗೆ 34 ಭಾ.ದಂ.ಸಂ ನೇ ಪ್ರಕರಣದಲ್ಲಿ ಆರೋಪಿ 2018 ರಲ್ಲಿ ಜಾಮೀನು ಪಡೆದ ನಂತರ, ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿದೆ.

ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 269 ಬಿ.ಎನ್.ಎಸ್‌ರಂತೆ ಪ್ರಕರಣ ದಾಖಲು ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೀಗ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.





















































 
 
error: Content is protected !!
Scroll to Top