ಪುತ್ತೂರು : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಪುತ್ತೂರು: ಕೌಡಿಚಾರ್ – ರೆಂಜ ರಸ್ತೆಯ ಪಾಪೆಮಜಲು ಎಂಬಲ್ಲಿ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಪಾಪೆಮಜಲು ನಿವಾಸಿ ಸುಭಾಷ್ (50) ಮೃತಪಟ್ಟವರು. ಅವರು ಶುಕ್ರವಾರ ರಾತ್ರಿ ವೇಳೆ ರಸ್ತೆ ದಾಟುತ್ತಿದ್ದಾಗ ಅವರಿಗೆ ರಿಕ್ಷಾ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

error: Content is protected !!
Scroll to Top