ಅಕ್ಷಯ ಕಾಲೇಜಿನಲ್ಲಿ FROM CAMPUS TO CAREER ಕಾರ್ಯಾಗಾರ

ಪುತ್ತೂರು: ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ಹಾಗೂ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಯೋಗದಲ್ಲಿ “FROM CAMPUS TO CAREER” ಕಾರ್ಯಗಾರ ನಡೆಯಿತು.

ಕಾಲೇಜಿನ ಉಪಪ್ರಾಂಶುಪಾಲ ರಕ್ಷಣಾ ಟಿ ಆರ್ ಅವರು ಮಾತನಾಡಿ, ಕಾಲೇಜಿನಲ್ಲಿ ನಡೆಯುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಉತ್ತೇಜನ ನೀಡಿದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಮೇಘಶ್ರೀ ಪ್ರಾಸ್ತವಿಕ ಮಾತುಗಳನ್ನಾಡಿ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್‌ನಲ್ಲಿ ನಡೆಯುವ ವಿವಿಧ ರೀತಿಯ ಸ್ಪರ್ಧೆಗಳ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ತನ್ನನ್ನು ತಾನು ಸಕ್ರಿಯವಾಗಿ ಸ್ಪರ್ಧಾತ್ಮಕವಾಗಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಿದರು.

ಸಂಪನ್ಮೂಲ ವ್ಯಕ್ತಿ ಆಂಗ್ಲ ಭಾಷಾ ಉಪನ್ಯಾಸಕಿ ದೀಪ್ತಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಮುಖ್ಯ ಅಂಶಗಳ ಕುರಿತು ವಿವರಿಸಿದರು. ಹಾಗೆಯೇ ತಮ್ಮ ಮುಂದಿನ ವೃತ್ತಿ ಜೀವನದಲ್ಲಿ ಸಂವಹನ ಹಾಗೂ ಶಿಷ್ಟಾಚಾರಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.





















































 
 

ಕಾರ್ಯಕ್ರಮದಲ್ಲಿ ಸಂಯೋಜಕಿ ರಶ್ಮಿ, ಐಕ್ಯೂಎಸಿ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ಶಹನ ಎಂ ಎಚ್ ಸ್ವಾಗತಿಸಿ, ಜನನಿ ಡಿ ಜಿ ನಿರೂಪಿಸಿದರು. ರಶ್ಮಿ ವಂದಿಸಿದರು.

error: Content is protected !!
Scroll to Top