ವಿಟ್ಲ: ಅಕ್ರಮವಾಗಿ ಸಾಗಿಸುತ್ತಿದ್ದ ಕೆಂಪುಕಲ್ಲು, ಲಾರಿ ವಶ

ವಿಟ್ಲ : ಎರಡು ಲಾರಿಗಳಲ್ಲಿ ಅಕ್ರಮವಾಗಿ ಕೆಂಪುಕಲ್ಲುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದಾರೆ. ಶನಿವಾರ ವಿಟ್ಲ ಠಾಣಾ ಉಪನಿರೀಕ್ಷಕ ರಾಮಕೃಷ್ಣ ಅವರು ತಮ್ಮ ಸಿಬ್ಬಂದಿಯೊಂದಿಗೆ ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಉಕ್ಕುಡ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ KA 01 AJ 9542 & KA 50 AF 3229 ನೋಂದಣಿ ಸಂಖ್ಯೆಯ ಎರಡು ಲಾರಿಗಳನ್ನು ನಿಲ್ಲಿಸಿ, ತಪಾಸಣೆ ನಡೆಸಲಾಗಿದೆ.

ಈ ವೇಳೆ ಅದರಲ್ಲಿ ತಲಾ 500 ಕೆಂಪುಕಲ್ಲುಗಳಿದ್ದವು. ಆದರೆ ಕೆಂಪುಕಲ್ಲು ಸಾಗಾಟದ ಬಗ್ಗೆ ಪರವಾನಗಿ ಇಲ್ಲದ ಕಾರಣ ಲಾರಿಗಳಿಗೆ ಕೆಂಪುಕಲ್ಲು ತುಂಬಿಸಿ ಕಳುಹಿಸಿಕೊಟ್ಟ ಜಾಫರ್ ಹಾಗೂ ನಾಸೀರ್ ಎಂಬವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಲಾರಿಗಳನ್ನು ಹಾಗೂ ಚಾಲಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!
Scroll to Top