ಬೆಂಗಳೂರು: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಮುಷ್ಕರವನ್ನು ಮಂಗಳವಾರದ ವರೆಗೆ ಸ್ಥಗಿತ ಮಾಡುವಂತೆ ಹೈಕೋರ್ಟ್ ಆದೇಶ ನೀಡಿರುವುದಾಗಿದೆ.
ಈ ಸಂಬಂಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ. ಜೊತೆಗೆ ನಾಳೆಯ ವರೆಗೆ ಮುಷ್ಕರ ಸ್ಥಗಿತಗೊಳಿಸುವಂತೆ ಕೋರ್ಟ್ ಆದೇಶ ನೀಡಿದೆ.
ಆ. 5 ರಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಇಲಾಖೆ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ಈ ಸಂಬಂಧ ಸಾರಿಗೆ ಒಕ್ಕೂಟ ಸಿಎಂ ಸಿದ್ದರಾಮಯ್ಯ ಅವರ ಜೊತೆ ಸಭೆ ನಡೆಸಿತ್ತು. ಆದರೆ ಈ ಸಭೆ ವಿಫಲವಾಗಿತ್ತು.
























