ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಮಾನ ಹಾನಿಕರ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರ್ಖಂಡ್‌ನ ಜೈಬಾಸಾದ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ರಾಹುಲ್ ಗಾಂಧಿ 2018 ರ ಚುನಾವಣಾ ರ್ಯಾಲಿಯಲ್ಲಿ ಅಮಿತ್ ಶಾ ವಿರುದ್ಧ ಮಾನ ಹಾನಿಕರ ಹೇಳಿಕೆ ನೀಡಿದ್ದರು.

ಇಂದು ಜಾರ್ಖಂಡ್ ಹೈಕೋರ್ಟ್ ನಿರ್ದೇಶನದಂತೆ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದರು. ಸದ್ಯ ರಾಹುಲ್‌ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳುವುದಾಗಿ ರಾಹುಲ್ ಪರ ವಕೀಲರು ಹೇಳಿದ್ದಾರೆ.





















































 
 
error: Content is protected !!
Scroll to Top