ವಕೀಲರು, ಉಜಿರೆಯ ಖಾಸಗಿ ವ್ಯಕ್ತಿಗಳ ಮನೆಯಲ್ಲಿರು ಬಗ್ಗೆ ಉಲ್ಲೇಖ
ಮಂಗಳೂರು: ಧರ್ಮಸ್ಥಳ ಪ್ರಕರಣದ ಕೇಂದ್ರ ಬಿಂದುವಾಗಿರುವ ಮುಸುಕುಧಾರಿ ವ್ಯಕ್ತಿಯನ್ನು ಎಸ್ಐಟಿ ತನ್ನ ವಶದಲ್ಲಿಯೇ ಇಟ್ಟುಕೊಂಡು ತನಿಖೆ ಮುಂದುವರಿಸಬೇಕೆಂದು ಆಗ್ರಹಿಸಿ ಬೆಳ್ತಂಗಡಿಯ ನಿವಾಸಿಯೊಬ್ಬರು ಎಸ್ಐಟಿಗೆ ಪತ್ರ ಬರೆದಿದ್ದಾರೆ.
ಬೆಳ್ತಂಗಡಿ ನಿವಾಸಿ ಶ್ಯಾಮ ಸುಂದರ ಎಂಬವರು ಈ ಪತ್ರ ಬರೆದಿದ್ದು, ಅನಾಮಿಕ ಮುಸುಕುಧಾರಿ ವ್ಯಕ್ತಿ 13 ಸ್ಥಳಗಳನ್ನು ಈಗಾಗಲೇ ತೋರಿಸಿದ್ದಾನೆ. ಆತ ಗುರುತಿಸಿದ 12 ಸ್ಥಳಗಳಲ್ಲಿ ಎಸ್ಐಟಿ ತಂಡ ತನಿಖೆ ನಡೆಸಿದೆ. ಆರಂಭದಲ್ಲಿ ಅನಾಮಿಕ ವ್ಯಕ್ತಿ ತನ್ನ ವಕೀಲರ ಜೊತೆ ಮಂಗಳೂರಿನ ರೂಮ್ವೊಂದರಲ್ಲಿ ನೆಲೆಸಿರುವ ಬಗ್ಗೆ ಮಾಹಿತಿಯಿತ್ತು. ಆದರೆ ಕೆಲ ದಿನಗಳಿಂದ ಈತ ಉಜಿರೆಯ ಖಾಸಗಿ ವ್ಯಕ್ತಿಯೊಬ್ಬರ ಮನೆಯಲ್ಲಿ ಉಳಿದುಕೊಳ್ಳುತ್ತಿರುವ ಬಗ್ಗೆ ಮಾಹಿತಿಯಿದೆ.
ಇಷ್ಟು ಗಂಭೀರ ಪ್ರಕರಣದಲ್ಲಿ ಅನಾಮಿಕನನ್ನು ಎಸ್ಐಟಿ ತಮ್ಮ ಸುಪರ್ದಿಯಲ್ಲಿ ಇಟ್ಟುಕೊಳ್ಳಬೇಕಿತ್ತು. ವಕೀಲರು, ಖಾಸಗಿ ವ್ಯಕ್ತಿಗಳ ಬಳಿ ಬಿಟ್ಟರೆ ನಿಷ್ಪಕ್ಷಪಾತ ತನಿಖೆ ಹೇಗೆ ನಡೆಯಲು ಸಾಧ್ಯ? ಹೀಗಾಗಿ ಅನಾಮಿಕ ವ್ಯಕ್ತಿಯನ್ನು ತಮ್ಮ ಸುಪರ್ದಿಯಲ್ಲಿ ಇರಿಸಿಕೊಳ್ಳಬೇಕು. ಜೊತೆಗೆ ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಈ ಕುರಿತು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮನವಿ ಪತ್ರಕ್ಕೆ ಎಸ್ಐಟಿ ಪತ್ರಿಕ್ರಿಯಿಸಿದ್ದು, ನಿಮ್ಮ ಅರ್ಜಿಯನ್ನು ಸ್ವೀಕರಿಸಿ ಪರಿಶೀಲಿಸುತ್ತೇವೆ. ಯಾವುದೇ ಅಪರಾಧ ಕೃತ್ಯದ ಬಗ್ಗೆ ಮಾಹಿತಿ ಅಥವಾ ದೂರನ್ನು ಸ್ಥಳೀಯ ವ್ಯಾಪ್ತಿಯ ಪೊಲೀಸ್ ಠಾಣೆಗೆ ಸಲ್ಲಿಸಬೇಕು ಎಂದು ತಿಳಿಸಿದೆ.
























