ಕಲ್ಲಾರೆ ಮಠದಲ್ಲಿ 51ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ ವಿಶ್ವಹಿಂದೂ ಪರಿಷದ್ ಮಾತೃ ಮಂಡಳಿ ಜಂಟಿ ಆಶ್ರಯದಲ್ಲಿ 51ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಶುಕ್ರವಾರ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮೀ ಮಠದ ಸಭಾಭವನದಲ್ಲಿ ಜರಗಿತು.

ಪೂಜೆಯ ಅಂಗವಾಗಿ ಶ್ರೀ ರಾಘವೇಂದ್ರ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪ ಅವರ ನೇತೃತ್ವದಲ್ಲಿ ಬೆಳಿಗ್ಗೆ 10.30 ಕ್ಕೆ ಕಲಶ ಪ್ರತಿಷ್ಠೆ ನಡೆದು ಭಕ್ತಾದಿಗಳಿಂದ ಸಂಕಲ್ಪ ನಡೆಯಿತು. 11 ಕ್ಕೆ ಲಲಿತ ಸಹಸ್ರನಾಮ ನಡೆದ ಬಳಿಕ ಬೊಳುವಾರು ತಿರುಪತಿ ತಿರುಮಲ ಟ್ರಸ್ಟ್ನಿಂದ ಭಜನೆ ನಡೆಯಿತು. ಮಧ್ಯಾಹ್ನ 12 ಕ್ಕೆ ಮಹಾಪೂಜೆ ನಡೆದು ಪ್ರಸಾದ ವಿತರಣೆಯಾಗಿ ಬಳಿಕ ಅನ್ನಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ 500 ಕ್ಕೂ ಮಿಕ್ಕಿ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡರು.





















































 
 

error: Content is protected !!
Scroll to Top