ಮತಗಳ್ಳತನ ಆರೋಪ ಮಾಡಿದ ರಾಗಾ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷ ಕಕ್ಕುವ‌ಘೋರ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎನ್ನುವ ರಾಹುಲ್ ಗಾಂಧಿ ಆರೋಪ ತಳ್ಳಿ ಹಾಕಿರುವ ಅವರು, ಚುನಾವಣಾ ಆಯೋಗದ ಮೇಲೆ ಸುಳ್ಳಿನ ಸುರಿಮಳೆ, ಜನತಂತ್ರಕ್ಕೆ ನೇಣು ಬಿಗಿಯುವ ಧೂರ್ತ ಹುನ್ನಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.





















































 
 
error: Content is protected !!
Scroll to Top