ಧರ್ಮಸ್ಥಳ ಕೇಸ್: SIT ಗೆ ವಿಶೇಷ ಅಧಿಕಾರ ನೀಡಿದ ರಾಜ್ಯ ಸರ್ಕಾರ

ಧರ್ಮಸ್ಥಳ: ನೂರಾರು ಹೆಣಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ SIT ಗೆ ರಾಜ್ಯ ಸರ್ಕಾರ ಪೊಲೀಸ್ ಠಾಣೆಯ ಎಲ್ಲಾ ಅಧಿಕಾರಗಳನ್ನು ನೀಡಿದೆ.

FIR ದಾಖಲಿಸುವುದು, ವಶಕ್ಕೆ ಪಡೆಯುವುದು, ಬಂಧನ, ನ್ಯಾಯಾಲಯಕ್ಕೆ ಪ್ರಾಥಮಿಕ ವರದಿ ಸಲ್ಲಿಕೆ, ಚಾರ್ಜ್‌ಶೀಟ್ ‌ಸಲ್ಲಿಕೆ ಸೇರಿದಂತೆ ಎಲ್ಲಾ ರೀತಿಯ ಸಂಪೂರ್ಣ ಅಧಿಕಾರವನ್ನು ನೀಡಿ ಆದೇಶ ಹೊರಡಿಸಿದೆ.

ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ನೀಡಲಾಗಿದ್ದು, SIT ಕಚೇರಿಯನ್ನು ಪೊಲೀಸ್ ಠಾಣೆ ಎಂದು ಗುರುತಿಸಲಾಗಿದೆ. ಈ ತಂಡದಲ್ಲಿರುವ ಎಸ್‌ಐ ಅಥವಾ ಅದಕ್ಕಿಂತ ಮೇಲ್ದರ್ಜೆಯ ಅಧಿಕಾರಿಯನ್ನು ಠಾಣಾಧಿಕಾರಿ ಎಂದು ಘೋಷಿಸಲಾಗಿದೆ. SIT ಪೊಲೀಸ್ ಠಾಣೆಗೆ ಇರುವ ತನಿಖಾ ಕಾರ್ಯ ವಿಧಾನಗಳನ್ನು ಅನುಸರಿಸಿ, ಸಂಬಂಧಿಸಿದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವ ಅಧಿಕಾರವನ್ನು ಪಡೆದಿದೆ.





















































 
 
error: Content is protected !!
Scroll to Top