ಮತಗಳ್ಳತನ ಆರೋಪ: ರಾಗಾಗೆ ತಿರುಗೇಟು ನೀಡಿದ ಚುನಾವಣಾ ಆಯೋಗ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನ, ಮತದಾನ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಮಾಡಿರುವ ಆರೋಪಕ್ಕೆ ಚುನಾವಣಾ ಆಯೋಗ ತಿರಗೇಟು ನೀಡಿದೆ.

ಬಿಹಾರದ ಕರಡು ಮತದಾರರ ಪಟ್ಟಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೂ ಕಾಂಗ್ರೆಸ್ ಯಾಕೆ ಆ‌ ಸಂದರ್ಭದಲ್ಲಿ ಪ್ರಶ್ನೆ ಮಾಡಿಲ್ಲ, ಆಯೋಗವನ್ನೇಕೆ ಸಂಪರ್ಕ ಮಾಡಿಲ್ಲ ಎಂದು ಚು. ಆಯೋಗ ಕೇಳಿದೆ.

ಮತದಾನದ ಸಮಯದಲ್ಲಿ ಯಾವುದೇ ರೀತಿಯ ಆಕ್ಷೇಪಣೆಗಳನ್ನು ಮಾಡದ ಕಾಂಗ್ರೆಸ್, ಫಲಿತಾಂಶ ಪ್ರಕಟವಾದ ಬಳಿಕ ಆಕ್ಷೇಪಣೆ ಸಲ್ಲಿಸುತ್ತದೆ. ಬಿಹಾರ ಚುನಾವಣಾ ಸಮಯದಲ್ಲಿ ಮತದಾನ ಪಟ್ಟಿಯ ಬಗ್ಗೆ ಯಾವ ಪಕ್ಷಗಳೂ ಆಕ್ಷೇಪಣೆ ಸಲ್ಲಿಸಿಲ್ಲ ಎಂದು ಆಯೋಗ ಸ್ಪಷ್ಟನೆ ನೀಡಿದೆ.





















































 
 
error: Content is protected !!
Scroll to Top