ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ದುರುಳರು

ಯುವತಿಯ ಸಹೋದರನಿಗೇ ವಿಡಿಯೋ ಕಳುಹಿಸಿ ವಿಕೃತಿ

ಹಾಸನ: ಬುದ್ಧಿಮಾಂದ್ಯ ಯುವತಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಹಾಸನದಲ್ಲಿ ನಡೆದಿದೆ. ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರದ ವಿಡಿಯೋ ಮಾಡಿ ಯುವತಿ ಸಹೋದರನಿಗೆ ಕಳುಹಿಸಿದ್ದಾರೆ. ಕೂಡಲೇ ಸಹೋದರ ಅತ್ಯಾಚಾರದ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

ವಿಡಿಯೋ ಕಳುಹಿಸಿದ ನಂತರ ದುರುಳರು ಡಿಲೀಟ್ ಮಾಡಿದ್ದರು. ಆದರೆ ಅಷ್ಟುಹೊತ್ತಿಗಾಗಲೇ ಸಂತ್ರಸ್ತೆ ಸಹೋದರ ವಿಡಿಯೋವನ್ನು ತನ್ನ ಸ್ನೇಹಿತನ ಮೊಬೈಲ್‌ಗೆ ಫಾರ್ವರ್ಡ್ ಮಾಡಿದ್ದ. ಘಟನೆ ಸಂಬಂಧ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷ, ಉಮ್ರಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.





















































 
 

ಸದ್ಯ ಅತ್ಯಾಚಾರ ಎಲ್ಲಿ, ಯಾವಾಗ ನಡೆದಿದೆ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೆನ್‌ಷನ್‌ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!
Scroll to Top