ಪುತ್ತೂರು : ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರ್‌ರಾಜ್ಯ ಆರೋಪಿ ಇಲಿಯಾಸ್ ಪಿ.ಎ. ಎಂಬಾತನನ್ನು ಪೊಲೀಸರು ಬಂಧಿಸಿ ಶುಕ್ರವಾರ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಕೇರಳ ರಾಜ್ಯದ ತೃಶ್ಶೂರ್ ಜಿಲ್ಲೆಯ ವಿಯ್ಯೂರು ಎಂಬಲ್ಲಿನ ನಿವಾಸಿಯಾದ ಇಲಿಯಾಸ್ ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು, ತೃಶ್ಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರು ಉಪವಿಭಾಗದ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಕೌಶಿಕ್ ನೇತೃತ್ವದಲ್ಲಿ ರಚಿಸಿದ ವಿಶೇಷ ತಂಡವು ಆರೋಪಿಯನ್ನು ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
























