ಕಲ್ಲಾರೆ ಮಠದಲ್ಲಿ ಶ್ರೀ ರಾಘವೇಂದ್ರ ಗುರುಗಳ 354ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

ಪುತ್ತೂರು: ಮೂರು ದಿನಗಳ ಕಾಲ ನಡೆಯಲಿರುವ ಶ್ರೀ ರಾಘವೇಂದ್ರ ಗುರುಗಳ ಆರಾಧನಾ ಮಹೋತ್ಸವದ ಅಂಗವಾಗಿ ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ 354ನೇ ಆರಾಧನಾ ಮಹೋತ್ಸವಕ್ಕೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಭಾನುವಾರ ಚಾಲನೆ ನೀಡಲಾಯಿತು.

ಆರಾಧನಾ ಮಹೋತ್ಸವದ ಅಂಗವಾಗಿ ಭಾನುವಾರ ಬೆಳಗ್ಗೆ 6 ಗಂಟೆಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, 10ಕ್ಕೆ  ಪಂಚಾಮೃತ ಅಭಿಷೇಕ, 12 ಕ್ಕೆ ಅಲಂಕಾರ ಪೂಜೆ, 1 ಕ್ಕೆ ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.





















































 
 
error: Content is protected !!
Scroll to Top