ಪುತ್ತೂರು : 10 ಕೆಜಿ ಭಾರದ ಘಂಟೆ ಕದ್ದವ ಸೆರೆ

ಪುತ್ತೂರು : ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು, ಕಬಕ ನಿವಾಸಿ ಸಂಶುದ್ದೀನ್ ಯಾನೆ ಸಂಶು (50) ಬಂಧಿತ ಆರೋಪಿ.

10 ಕೆಜಿ ತೂಕದ ಸುಮಾರು 8,000 ರೂ. ಬೆಲೆ ಬಾಳುವ ತಾಮ್ರದ ಗಂಟೆ ಕಳವು ಘಟನೆಗೆ ಸಂಬಂಧಿಸಿದಂತೆ ಜುಲೈ 26ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿ ಪುತ್ತೂರು ನಗರ ಠಾಣಾ ಅ.ಕ್ರ 83/2004, ಕಲಂ: 454, 380 ಐಪಿಸಿ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!
Scroll to Top