ಬೆಂಗಳೂರು: ಸೆಪ್ಟೆಂಬರ್ ಕ್ರಾಂತಿಯ ಬಗ್ಗೆ ಹೇಳಿಕೆ ನೀಡುತ್ತಿದ್ದ ಸಚಿವ ಕೆ. ಎನ್. ರಾಜಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿರುವುದಾಗಿ ತಿಳಿದು ಬಂದಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದ ಸಂದರ್ಭದಲ್ಲಿ ರಾಜಣ್ಣ ಅವರು ಕಾಂಗ್ರೆಸ್ ವಿರುದ್ಧವೇ ಆರೋಪ ಮಾಡಿದ್ದರು.
ಮತಗಳ್ಳತನ ನಡೆದದ್ದು ನಿಜ. ಆದರೆ ನಾವು ಮೊದಲು ನೋಡಿಕೊಳ್ಳದೆ ಈಗ ಹೇಳುತ್ತಿರುವುದು ನಾಚಿಕೆಯ ಸಂಗತಿ. ವೋಟರ್ ಲಿಸ್ಟ್ ಮಾಡಿದ್ದು ನಮ್ಮದೇ ಸರ್ಕಾರ ಇದ್ದಾಗ. ಆಗೇನು ಕಣ್ಮುಚ್ಚಿ ಕುಳಿತಿದ್ದಿರಾ ಎಂದು ಪ್ರಶ್ನೆ ಮಾಡಿದ್ದರು.
ಇದು ಕಾಂಗ್ರೆಸ್ ಪಕ್ಷಕ್ಕೆ ಇರಿಸಿ ಮುರಿಸು ಉಂಟು ಮಾಡಿದ್ದು, ಹೈಕಮಾಂಡ್ ಕಣ್ಣು ಕೆಂಪಾಗಿಸಿತ್ತು. ಹೀಗಾಗಿ ರಾಜಣ್ಣಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿತ್ತು ಎಂಬ ಮಾಹಿತಿ ಕೇಳಿ ಬಂದಿದೆ.
























