ಧರ್ಮಸ್ಥಳ : ಮೂವರು ಯೂಟ್ಯೂಬರ್‌ಗಳ ವಿರುದ್ಧ ಹಲ್ಲೆ ಕೇಸ್‌ ದಾಖಲು

ಬೆಳ್ತಂಗಡಿ: ಬೈಕ್ ಸವಾರನನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಮೂವರು ಯೂಟ್ಯೂಬರ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆ.6ರಂದು ಘಟನೆ ನಡೆದಿದ್ದು, ಈ ಬಗ್ಗೆ ಹರೀಶ್ ನಾಯ್ಕ ಎಂಬವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ತಾನು ಬೈಕ್‌ನಲ್ಲಿ ಹೋಗುತ್ತಿದ್ದ‌ ವೇಳೆ ಪಾಂಗಳ ಕ್ರಾಸ್ ಬಳಿ ತಡೆದು ನಿಲ್ಲಿಸಿದ ಯುಟ್ಯೂಬರ್‌ಗಳು ತಾವು ಕುಡ್ಲ ರಾಂಪೇಜ್‌ನವರು ಎಂದು ಹೇಳಿದ್ದು, ಈ ರಸ್ತೆಯ ಪಕ್ಕದಲ್ಲಿ ಹೆಣಗಳನ್ನು ಹೂತು ಹಾಕಿದ್ದೀರಾ? ಇದರ ಬಗ್ಗೆ ನಿಮಗೆ ಗೊತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ. ಅವರು ನನ್ನ ಹೆಸರು ಕೇಳಿದ್ದು ನಾನು ಹರೀಶ್ ನಾಯ್ಕ ಎಂದಾಗ ಅವರು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ಹರೀಶ್ ನಾಯ್ಕ ದೂರು ನೀಡಿದ್ದಾರೆ.

ಧರ್ಮಸ್ಥಳ ಠಾಣೆಯಲ್ಲಿ ಯೂಟ್ಯೂಬರ್‌ಗಳ ವಿರುದ್ಧ ಅಪರಾಧ ಕ್ರಮ ಸಂಖ್ಯೆ 50/2025 ಕಲಂ126(2)115(2) 352 ಜೊತೆಗೆ 3(5) ಬಿಎನ್.ಎಸ್. ನಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





















































 
 
error: Content is protected !!
Scroll to Top