ಧರ್ಮಸ್ಥಳ ಪ್ರಕರಣದ ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ: ಡಾ. ಜಿ. ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ SIT ತನಿಖೆ ನಡೆಸುತ್ತಿದ್ದು, ಅದು ಪೂರ್ಣವಾಗುವ ವರೆಗೆ ತಾನು ಈ ಸಂಬಂಧ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಈ ಬಗ್ಗೆ ಹಲವರು ಸಾಕಷ್ಟು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ನನ್ನ ಗಮನಕ್ಕೂ ಬಂದಿದೆ. ಆದರೆ ತನಿಖೆ ಮುಗಿಯುವ ವರೆಗೆ ಈ ಬಗ್ಗೆ ಮಾತನಾಡುವುದು ಸಮಂಜಸವಲ್ಲ. ತನಿಖೆಯ ಬಳಿಕ ವಾಸ್ತವಾಂಶ ಬೆಳಕಿಗೆ ಬರಲಿದೆ ಎಂದಿದ್ದಾರೆ.

ಈ ಬಗ್ಗೆ ಸದನದಲ್ಲಿ ಪ್ರಶ್ನೆಗಳು ಬಂದರೆ ಉತ್ತರ ನೀಡಲಾಗುವುದು ಎಂದು ಅವರು ನುಡಿದಿದ್ದಾರೆ.





















































 
 

error: Content is protected !!
Scroll to Top