ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಬಂಧನದಲ್ಲಿರುವ ನಟಿ ರನ್ಯಾ ರಾವ್ ಮಲ ತಂದೆ, ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರ ಕಡ್ಡಾಯ ರಜೆ ಆದೇಶ ಹಿಂಪಡೆದಿರುವ ರಾಜ್ಯ ಸರ್ಕಾರ, ಅವರನ್ನು ಮರು ನೇಮಿಸಿ ಆದೇಶಿಸಿದೆ.
ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರಾಗಿ ಮೇಲ್ದರ್ಜೆಗೆ ಏರಿಸಲಾಗಿದೆ.
ನಟಿ ರನ್ಯಾ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ರಾಮಚಂದ್ರ ರಾವ್ ಅವರ ಸಂಭಾವ್ಯ ಪಾತ್ರದ ತನಿಖೆ ಮಾಡಲು ಅವರನ್ನು ಮಾರ್ಚ್ 15 ರಂದು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.
























